Crude Oil: ಕಚ್ಚಾ ತೈಲ ದರ ಕುಸಿತ: ಇಳಿಕೆಯಾಗುವುದೇ ಪೆಟ್ರೋಲ್‌, ಡೀಸೆಲ್‌ ದರ?

Published on

spot_img
spot_img

ವಿವೇಕವಾರ್ತೆ: ಜಾಗತಿಕ ಆರ್ಥಿಕ ಕುಸಿತದ ಆತಂಕದ ನಡುವೆ ಕಚ್ಚಾ ತೈಲ ದರ ಬ್ಯಾರೆಲ್‌ಗೆ 3 ಡಾಲರ್‌ಗಿಂತ ಹೆಚ್ಚು ಕುಸಿತ ಕಂಡಿದೆ. ಈ ಮೂಲಕ ಅಕ್ಟೋಬರ್ 5ರಂದು ಬ್ಯಾರೆಲ್‌ಗೆ 86 ಡಾಲರ್‌ಗೆ ಇಳಿಕೆಯಾಗಿದೆ. ಡಿಸೆಂಬರ್‌ವರೆಗೆ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತ ಮಾಡುವುದಾಗಿ ಸೌದಿ ಅರೇಬಿಯಾ ಮತ್ತು ರಷ್ಯಾ ಘೋಷಣೆ ಮಾಡಿದ್ದರೂ ಬೆಲೆ ಇಳಿಕೆಯಾಗಿದೆ.

ಕಚ್ಚಾ ತೈಲ ದರ ಒಂದೇ ದಿನದಲ್ಲಿ ಶೇ. 5ರಷ್ಟು ಕುಸಿತ ಕಂಡಿದ್ದು, ಒಂದು ವಾರದಲ್ಲಿ ಬರೋಬ್ಬರಿ ಶೇ. 8ರಷ್ಟು ಇಳಿಕೆಯಾಗಿದೆ. ಈ ಮೂಲಕ ಒಂದು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ಮೂಲಕ ಕಳೆದ ವರ್ಷದ ಏರಿಕೆ ಪ್ರವೃತ್ತಿಗೆ ವಿರುದ್ಧವಾಗಿ ದರ ಇಳಿಕೆ ಹಾದಿಯಲ್ಲಿದೆ.

ತೈಲ ಬೆಲೆಗಳು ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಶೇ. 9ರಷ್ಟು ಏರಿಕೆ ಕಾಣುವುದರೊಂದಿಗೆ ಜುಲೈ-ಸೆಪ್ಟೆಂಬರ್‌ ಅವಧಿಯಲ್ಲಿ ಶೇ. 27ರಷ್ಟು ಹೆಚ್ಚಳವಾಗಿತ್ತು. ಇದೀಗ ಅಕ್ಟೋಬರ್‌ನಲ್ಲಿ ಬೆಲೆ ಇಳಿಕೆ ಕಾಣಲಾರಂಭಿಸಿದೆ.

ತೈಲ ಮಾರುಕಟ್ಟೆಗಳಲ್ಲಿ ಬಿಗಿಯಾದ ಪೂರೈಕೆಯಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್‌ಗೆ 90 ಡಾಲರ್‌ ಆಸುಪಾಸಿನಲ್ಲೇ ಇವೆ. ಸೌದಿ ಅರೇಬಿಯಾ ಮತ್ತು ರಷ್ಯಾ ಸೇರಿದಂತೆ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರಗಳು ಕಚ್ಚಾ ತೈಲ ಬೆಲೆಗಳನ್ನು ಹೆಚ್ಚಿಸಲು ಉತ್ಪಾದನೆಯನ್ನು ಕಡಿತಗೊಳಿಸಿವೆ.

ಇಳಿಕೆಯಾಗುವುದೇ ಪೆಟ್ರೋಲ್‌, ಡೀಸೆಲ್‌ ದರ?

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಇಳಿಕೆ ಮಾಡಲಿದೆ ಎಂಬ ಸುದ್ದಿ ಇತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದ್ದು, ಬೆಲೆ ಇಳಿಸಲು ಹೊರಟಿದ್ದ ಕೇಂದ್ರಕ್ಕೆ ಅಡ್ಡಿಯಾಗಿತ್ತು. ಇದೀಗ ಮತ್ತೆ ಕಚ್ಚಾ ತೈಲ ದರ ಇಳಿಕೆಯಾಗಿರುವುದರಿಂದ ಕೇಂದ್ರದ ಸೂಚನೆ ಮೇರೆಗೆ ತೈಲ ಮಾರಾಟ ಕಂಪನಿಗಳು ದರ ಇಳಿಕೆ ಮಾಡಲಿವೆಯೇ ಎಂಬುದನ್ನು ನೋಡಬೇಕಿದೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!