ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ: 24 ಗಂಟೆಯಲ್ಲಿ 12 ನವಜಾತ ಶಿಶು ಸೇರಿ 24 ರೋಗಿಗಳು ಸಾವು

Published on

spot_img
spot_img

ವಿವೇಕವಾರ್ತೆ : ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ನಾದೆಂಡ್ʼ‌ನ ಸರ್ಕಾರಿ ಆಸ್ಪತ್ರೆಯಲ್ಲಿ (Nanded Hospital) ನಡೆದಿದೆ. ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಲ್ಲಿ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸೇರಿ 12 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯ ಡೀನ್ ಶಂಕರರಾವ್ ಚವ್ಹಾಣ ಹೇಳಿದ್ದಾರೆ.

ಈ ಘಟನೆಗೆ ಔಷಧಿ (Medicines) ಮತ್ತು ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ದೂಷಿಸಿದ್ದಾರೆ. ಇಲ್ಲಿರುವ ಸುತ್ತಮುತ್ತಲಿನ 70-80 ಕಿಮೀ ವ್ಯಾಪ್ತಿಗೆ ಇರುವುದೊಂದೇ ಆಸ್ಪತ್ರೆ. ದೂರದ ಸ್ಥಳಗಳಿಂದ ಇಲ್ಲಿಗೆ ಬರುತ್ತಾರೆ. ಕೆಲವು ದಿನಗಳಿಂದೀಚೆಗೆ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೆಲವು ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಿ ಪೂರೈಸಬೇಕು, ಆದ್ರೆ ಇವತ್ತು ‌ಅದೂ ಸಾಕಾಗಿಲ್ಲ. ಇದೇ ಸಮಯಕ್ಕೆ ಸಿಬ್ಬಂದಿಯ ಕೊರತೆಯೂ ಉಂಟಾಗಿದ್ದು, ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!