ವಿವೇಕವಾರ್ತೆ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಅವರ ಭವಿಷ್ಯ ನಿಜವಾಗಿದೆ.
ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ.
ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿಯ ಮೌಲ್ಯ ಕೇವಲ 10 ಪಟ್ಟಲ್ಲ, ಸಾವಿರಾರು ಪಟ್ಟು ಹೆಚ್ಚಾಗಲಿದೆ ಎಂದು ಅಮೆರಿಕಾ ದೇಶದ ರಾಯಭಾರಿಯೊಬ್ಬರು ನನ್ನ ಬಳಿ ಹೇಳಿದ್ದರು. ಅವರ ಮಾತು ನಿಜವಾಗಿದೆ, ಏಕೆಂದರೆ ನಾನು ಸದಾಶಿವ ನಗರದಲ್ಲಿ ಚದರ ಅಡಿಗೆ 2 ಸಾವಿರ ಕೊಟ್ಟು ಮನೆ ತೆಗೆದುಕೊಂಡಿದ್ದೆ ಈಗ ಅದು 30 ಸಾವಿರವಾಗಿ ಬೆಳೆದಿದೆ ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ಜಿಂದಾಲ್ ಸಂಸ್ಥೆಯ ಮುಖ್ಯಸ್ಥರು ಕೂಡ ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಓದಿದರು. ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹೊಸ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಗ್ರಾಮೀಣ ಮಕ್ಕಳಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುವಂತೆ ಗುಣಮಟ್ಟದ ಶಿಕ್ಷಣ ನೀಡಲು ಪಂಚಾಯ್ತಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದೇವೆ. ಈ ವಿಚಾರವಾಗಿ ನಿನ್ನೆಯಷ್ಟೆ ಸಿಎಸ್ ಆರ್ ಸಭೆ ಮಾಡಿದ್ದೇವೆ.
ಮೊದಲ ಅಂತಾರಾಷ್ಟ್ರೀಯ ಹೂಡಿಕೆದಾರರ ಸಮ್ಮೇಳನ ನಡೆದಿದ್ದು ಎಸ್.ಎಂ.ಕೃಷ್ಣ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಂತಹ ಸಮಯದಲ್ಲಿ. ಅಂದಿನಿಂದ ಇಲ್ಲಿಯವರೆಗೆ ಕರ್ನಾಟಕ ಸರ್ಕಾರವು ಉದ್ಯಮ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ಒತ್ತು ನೀಡುತ್ತಿದೆ. ಇಂದು ಗುಣಮಟ್ಟದ ಶಿಕ್ಷಣಕ್ಕಾಗಿ ಬೇರೆ ಊರುಗಳಿಂದ ಬೆಂಗಳೂರಿಗೆ, ಕರ್ನಾಟಕಕ್ಕೆ ವಿದ್ಯಾರ್ಥಿಗಳು ವಲಸೆ ಬರುತ್ತಿದ್ದಾರೆ. 250 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳು ಕರ್ನಾಟಕದಲ್ಲಿ ಇವೆ ಎಂದು ಹೇಳಿದರು