spot_img
spot_img
spot_img
spot_img
spot_img
spot_img

ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!

Published on

spot_img

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಹಾಲಿನಲ್ಲಿ ಎಲ್ಲಾ ರೀತಿಯ ಪೋಷಕಾಂಶ ಗಳಿವೆ. ಹಾಲು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪ್ರೋಟೀನ್ ಮತ್ತು ಕ್ಯಾಲ್ಸಿಯಂಗಳನ್ನು ಪಡೆಯಬಹುದು. ಹಾಗೆಯೇ ಪ್ರತಿನಿತ್ಯ ಹಾಲು ಕುಡಿಯುವುದರಿಂದ ನಮ್ಮ ಮೂಳೆಗಳನ್ನು ಬಲಪಡಿಸಬಹುದು. ಇನ್ನು ಹಾಲಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಿಣ್ವಗಳಿದ್ದು ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಆದರೆ ಯಾವ ಹಾಲು ಕುಡಿಯಬೇಕು ಎಂಬುದು ಸಾಮಾನ್ಯ ಪ್ರಶ್ನೆ. ಏಕೆಂದರೆ ಕೆಲವರು ಹಸಿ ಹಾಲು ಅಥವಾ ಕಚ್ಚಾ ಹಾಲು ಕುಡಿಯುವುದು ಇಷ್ಟಪಟ್ಟರೆ, ಮತ್ತೆ ಕೆಲವರು ಬಿಸಿ ಹಾಲನ್ನೇ ಕುಡಿಯುತ್ತಾರೆ. ನಮ್ಮ ಸಮಾಜದಲ್ಲಿ ಹಸಿ ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬ ನಂಬಿಕೆಯೂ ಇದೆ. ಆದರೆ ಹೊಸ ಸಂಶೋಧನೆಯಲ್ಲಿ ಹಸಿ ಹಾಲಿನ ಸೇವನೆಯು ದೇಹದಲ್ಲಿ ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬ ಎಚ್ಚರಿಕೆ ನೀಡಿದೆ.

ಆರೋಗ್ಯ ವರದಿ ಪ್ರಕಾರ, ಸಾಲ್ಮೊನೆಲ್ಲಾ, ಇ ಕೋಲಿ, ಲಿಸ್ಟೇರಿಯಾದಂತಹ ಹಾನಿಕಾರಕ ಬ್ಯಾಕ್ಟೀರಿಯಾಗಳು ಎಲ್ಲಾ ಪ್ರಾಣಿಗಳ ಹಾಲಿನಲ್ಲಿ ಇರುತ್ತವೆ. ಇದನ್ನು ಕುದಿಸದೆ ಕುಡಿದರೆ ಫುಡ್​ ಪಾಯಿಸನ್​ಗೆ ಕಾರಣವಾಗಬಹುದು. ಇದರಿಂದ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕೂಡ ತಲೆದೂರಬಹುದು. ಹಾಗಾದರೆ ಹಸಿ ಹಾಲನ್ನು ಕುಡಿಯುವುದರಿಂದ ಆಗುವ ಅನಾನುಕೂಲಗಳೇನು ಎಂದು ನೋಡೋಣ.

– ಕಚ್ಚಾ ಅಥವಾ ಹಸಿ ಹಾಲಿನಲ್ಲಿ ಅನೇಕ ರೀತಿಯ ಹಾನಿಕಾರಕ ಬ್ಯಾಕ್ಟೀರಿಯಾಗಳಿರುತ್ತವೆ. ಅದು ನಮ್ಮ ದೇಹವನ್ನು ಸೇರಿ ಅತಿಸಾರ, ನಿರ್ಜಲೀಕರಣ, ಗುಯಿಲಿನ್-ಬಾರ್ ಸಿಂಡ್ರೋಮ್ ಮತ್ತು ಹೆಮೋಲಿಟಿಕ್ ಯುರೆಮಿಕ್ ಸಿಂಡ್ರೋಮ್‌, ಸಂಧಿವಾತದಂತಹ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು.

– ಕಚ್ಚಾ ಹಾಲು ಕುಡಿಯುವುದರಿಂದ ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರಲ್ಲಿ ಹೆಚ್ಚಿನ ಅನಾರೋಗ್ಯದ ಸಮಸ್ಯೆ ಕಾಣಿಸುತ್ತವೆ. ಮುಖ್ಯವಾಗಿ ಮಕ್ಕಳಲ್ಲಿ ಹಾಗೂ ಹಿರಿಯರಲ್ಲಿ ಇಂತಹ ಸಮಸ್ಯೆಗಳು ಬೇಗನೆ ತಲೆದೂರಬಹುದು.

– ಹಸಿ ಹಾಲು ಸೇವನೆಯಿಂದಾಗಿ, ವಾಕರಿಕೆ, ವಾಂತಿ ಅಥವಾ ಭೇದಿ ಇತ್ಯಾದಿಗಳ ಸಾಧ್ಯತೆ ತುಂಬಾ ಹೆಚ್ಚು.

– ಕಚ್ಚಾ ಹಾಲಿನಲ್ಲಿರುವಂತಹ ಬ್ಯಾಕ್ಟೀರಿಯಾಗಳು ನಿಮಗೆ ಟಿಬಿ ಸಮಸ್ಯೆ ಹಾಗೂ ಇನ್ನಿತರ ಅನೇಕ ಮಾರಕ ರೋಗಗಳಿಗೆ ಕಾರಣವಾಗಬಹುದು.

– ದೇಹದ ಆಸಿಡ್ ಮಟ್ಟವು ನಿಯಂತ್ರಣದಲ್ಲಿರುವುದು ಅವಶ್ಯಕ. ಆದರೆ ಹಸಿ ಹಾಲನ್ನು ಸೇವಿಸಿದಾಗ ಅದು ನಿಯಂತ್ರಣದಲ್ಲಿರುವುದಿಲ್ಲ ಮತ್ತು ದೇಹದಲ್ಲಿ ಆಮ್ಲೀಯತೆಯ ಪ್ರಮಾಣ ಹೆಚ್ಚಾಗುತ್ತದೆ.

– ಕಚ್ಚಾ ಹಾಲು ಗಾಳಿಯ ಸಂಪರ್ಕಕ್ಕೆ ಬಂದ ತಕ್ಷಣ ಅದರಲ್ಲಿನ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಹೀಗಾಗಿಯೇ ಕಚ್ಚಾ ಹಾಲು ಬೇಗನೆ ಹಾಳಾಗುವುದು. ಅಂದರೆ ಇದರಲ್ಲಿರುವ ಬ್ಯಾಕ್ಟೀರಿಯಾಗಳು ಹಾಲನ್ನೇ ಹಾಳು ಮಾಡುವುದಾದರೆ,

ಅದು ದೇಹ ಸೇರಿದರೆ ಇನ್ನು ಹಲವು ಅನಾರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಬಹುದು. ಈ ಎಲ್ಲಾ ಕಾರಣಗಳಿಂದ ಹಸಿ ಹಾಲಿನ ಸೇವನೆಯಿಂದ ದೂರವಿರಿ. ಅಷ್ಟೇ ಅಲ್ಲದೆ ಕಚ್ಚಾ ಹಾಲನ್ನು ಕುಡಿಯುವುದರಿಂದ ಹೆಚ್ಚಿನ ಪ್ರಯೋಜನಗಳಿವೆ ಎಂಬುದು ಕೂಡ ವೈಜ್ಞಾನಿಕವಾಗಿ ಸಾಬೀತಾಗಿಲ್ಲ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!