spot_img
spot_img
spot_img
spot_img
spot_img
spot_img

ಜಾತ್ರೆ ವೇಳೆ ಕುಡಿದು ರಂಪಾಟ – ಮೂವರಿಗೆ ಸ್ಟೀಲ್ ಕಟರ್‌ನಿಂದ ಇರಿತ 

Published on

spot_img

ವಿವೇಕವಾರ್ತೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್‌ನಿಂದ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಉಡುಸಲಮ್ಮ ದೇವಿಯ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಬೇರೆ ಬೇರೆ ಕಡೆಯಿಂದ ಗ್ರಾಮಕ್ಕೆ ಜನ ಬಂದಿದ್ದರು. ಇದೇ ವೇಳೆ ವಿರೇಶ್ ಎಂಬಾತ ಕುಡಿದು ಗಲಾಟೆ ಆರಂಭಿಸಿದ್ದಾನೆ. ಬಳಿಕ ದೇವಾಲಯದ ಬಳಿ ಇದ್ದ ಮೂವರು ಅದೇ ಗ್ರಾಮದ ಯುವಕರಿಗೆ ಸ್ಟೀಲ್  ಇರಿದಿದ್ದಾನೆ.

ಗ್ರಾಮದ ಪವನ್, ಮಾರುತಿ ಹಾಗೂ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದಿನಿಂದಲೂ ವೀರೇಶ್ ಹಾಗೂ ಹಲ್ಲೆಗೊಳಗಾದ ಮೂವರು ಯುವಕರ ನಡುವೆ ಜಾತಿ ವೈಷಮ್ಯ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸ್ಟೀಲ್ ಕಟರ್‌ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!