spot_img
spot_img
spot_img
spot_img
spot_img
spot_img

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 2024ರ ಅಂತಿಮ ಮತದಾರರ ಪಟ್ಟಿ ಪ್ರಕಟ

Published on

spot_img

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.

ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬAಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in ಮತ್ತು ಬಿಬಿಎಂಪಿ www.bbmp.gov.in ವೆಬ್‌ಸೈಟ್ ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು ಎಂದರು.

ಸಾರ್ವಜನಿಕರು/ಮತದಾರರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೆ Web Portal-Voters.eci.gov.in, Voter Helpline Mobile App ಹಾಗೂ 1950 Voter Helpline ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬAಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!