spot_img
spot_img
spot_img
spot_img
spot_img
spot_img

ಕಾಂಗ್ರೆಸ್‌ ಬಿಡುವ ಆತಂಕ: ಲಕ್ಷ್ಮಣ್‌ ಸವದಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

Published on

spot_img

ವಿವೇಕವಾರ್ತೆ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಆಪರೇಷನ್‌ ಸದ್ದು ಜೋರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್‌, ಲೋಕಸಭಾ ಚುನಾವಣೆ ಆಪರೇಷನ್‌ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ನಾಯಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕಿತ್ತು.

ಆದರೆ, ಇದೀಗ ಬಿಜೆಪಿ ರಿವರ್ಸ್‌ ಆಪರೇಷನ್‌ ನಡೆಸಿದೆ.ಹೌದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಇದೀಗ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದು, ಜಗದೀಶ್ ಶೆಟ್ಟರ್ ಘರ್ ವಾಪ್ಸಿಯಾದ ನಂತರ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಬಿಜೆಪಿಗೆ ಹೋಗ್ತಾರೆ ಎಂಬ ಚರ್ಚೆಗಳು ರಾಜಕೀಯ ಅಂಗಳದಲ್ಲಿ ನಡೆಯುತ್ತಿವೆ. ಬಿಜೆಪಿಗೆ ಲಕ್ಷ್ಮಣ್‌ ಸವದಿ ಅವರು ಮರು ಸೇರ್ಪಡೆಯಾಗುವುದನ್ನ ತಡೆಯುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಈಗಾಗಲೇ ಲಕ್ಷ್ಮಣ್‌ ಸವದಿ ಅವರ ಜೊತೆಗೆ ಸುದೀರ್ಘ ಚರ್ಚೆಯನ್ನ ನಡೆಸಿದ್ದಾರೆ.

ಸವದಿ ಅಸಮಾಧಾನ ಬೆನ್ನಲ್ಲೇ ಸವದಿ ತನ್ನಗಾಗಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಅಲ್ಲದೇ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿ ಮತಕ್ಷೇತ್ರಕ್ಕೆ ಭರಪೂರ ಅನುದಾನ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಥಣಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಲಕ್ಷ್ಮಣ್‌ ಸವದಿಯವರ ಅಥಣಿ ಕ್ಷೇತ್ರದ ಮಹತ್ತರ ಯೋಜನೆಯಾದ ಅಮ್ಮಾಜೇಶ್ವರಿ ಏತ ನೀರಾವರಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. 1486 ಕೋಟಿ ರೂಪಾಯಿ ವೆಚ್ಚದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿದ್ದು, 11 ಹಳ್ಳಿಗಳ 9950 ಹೆಕ್ಟೇರ್ ಪ್ರದೇಶ ಹಾಗೂ 13 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಅಂದಿನ ಬಿಜೆಪಿ ಸರ್ಕಾರದ ವೇಳೆ ಚುನಾವಣೆ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದರು.

ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಮಗಾರಿಯನ್ನ ಕೈ ಬಿಡಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇದೇ ತಿಂಗಳು 18 ಅಥವಾ 19 ರಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...

ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

ಆಧಾರ್ ಕಾರ್ಡ್ ಇರುವ ದೇಶದ ಎಲ್ಲ ನಾಗರಿಕರಿಗೆ ಕೇಂದ್ರದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಬಿಗ್ ಶಾಕ್ ಇದೆ. ಮಾರ್ಚ್...

PUC ಪಾಸಾಗಿದ್ರೆ ಈ ಹುದ್ದೆಗಳಿಗೆ ಅಪ್ಲೈ ಮಾಡಿ..! ತಿಂಗಳಿಗೆ 63,000 ಸಂಬಳ

12ನೇ ತರಗತಿಯನ್ನು (PUC) ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ...
error: Content is protected !!