spot_img
spot_img
spot_img
spot_img
spot_img
spot_img

ಅತ್ತಿಗೆ ಮೇಲೆ ಗ್ಯಾಂಗ್‌ರೇಪ್ ಮಾಡಿ ಕೊಲೆಗೈದ ಐವರು ಮೈದುನರು

Published on

spot_img

ವಿವೇಕವಾರ್ತೆ: ತನ್ನ 5 ಜನ ಸಹೋದರರಿಗೆ ಹಣ ನೀಡಿ ಪತ್ನಿಯನ್ನೇ (Wife)  ಪತಿ (Husband)  ಕೊಲೆ ಮಾಡಿಸಿರುವ ಘಟನೆ ಫತೇಪುರ್‌ನಲ್ಲಿ  (Fatehpur)  ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ (Uttar Pradesh) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ರೋಹಿತ್ ಲೋಧಿ, ರಾಮಚಂದ್ರ ಆಲಿಯಾಸ್ ಪುಟ್ಟು, ಶಿವಂ ಅಲಿಯಾಸ್ ಪಂಚಮ್, ಸೋನು ಲೋಧಿ ಎಂದು ಗುರುತಿಸಲಾಗಿದೆ. ಐದನೇ ಆರೋಪಿಯಾದ ನೊಂಕು ಲೋಧಿ ಪರಾರಿಯಾಗಿದ್ದಾನೆ. ಸಂತ್ರಸ್ತೆಯ ಗಂಡ ದುಬೈನಲ್ಲಿದ್ದಾನೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ?
ತವರು ಮನೆಗೆ ಹೋಗಿದ್ದ ಆತ್ತಿಗೆಯನ್ನು ಜಾತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ ಆಕೆಯನ್ನು ನಂಬಿಸಿ ಮೈದುನರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಯ ಮೇಲೆ ಐದು ಜನ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯ ಗುರುತನ್ನು ಮರೆಮಾಚಲು ಮುಖಕ್ಕೆ ಇಟ್ಟಿಗೆಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಹಲ್ಲೆ ಮಾಡಿದ ನಂತರ ಸಂತ್ರಸ್ತೆಯ ಮೃತದೇಹವನ್ನು ಬೆತ್ತಲೆಯಾಗಿಯೇ ಫತೇಪುರ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ನೀರಿನ ಟ್ಯಾಂಕ್‌ನಲ್ಲಿ ಬಿಸಾಡಿ ಹೋಗಿದ್ದರು. ಗ್ರಾಮಸ್ಥರು ಮೃತದೇಹವನ್ನು ಕಂಡು ಈ ಕುರಿತು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಂತ್ರಸ್ತೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಜೊತೆಗೆ ಸ್ಥಳದಲ್ಲಿ ಆರೋಪಿಗಳು ಕುಡಿದು ಬಿಸಾಡಿದ ಮದ್ಯದ ಬಾಟಲಿ ಮತ್ತು ತಿನಿಸುಗಳು ದೊರಕಿವೆ.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೊಲೆ ಬಗ್ಗೆ ಬಾಯಿಬಿಟ್ಟಿದ್ದು, ಸಂತ್ರಸ್ತೆಯ ಪತಿಯೇ ಇದಕ್ಕೆ ಸಾಥ್ ನೀಡಿರುವುದಾಗಿ ಬೆಳಕಿಗೆ ಬಂದಿದೆ. ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕೊಲೆ ಮಾಡಿದರೆ ಹಣ ನೀಡುವುದಾಗಿ ಸಂತ್ರಸ್ತೆಯ ಪತಿ, ಅವನ ಐದು ಮಂದಿ ಸಹೋದರಿಗೆ ಹಣದ ಆಸೆ ತೋರಿಸಿದ್ದ. ಹಣದ ಮೋಹಕ್ಕೆ ಒಳಗಾದ ಸಹೋದರರು ಅತ್ತಿಗೆಯನ್ನೆ ಕೊಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ದುಬೈನಲ್ಲಿದ್ದಾನೆ. ಐದನೇ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ತಲೆಗೆ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢೀಕರಿಸಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!