spot_img
spot_img
spot_img
spot_img
spot_img

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

Published on

spot_img

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.

ಕಳೆದ ಕೆಲ ದಿನಗಳ ಹಿಂದೆ ಪಕ್ಷವನ್ನು ಬಳಪಡಿಸುವ ಹಿನ್ನಲೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಎಲ್ಲಾ ಘಟಕಗಳ ವಿಸರ್ಜನೆ ಮಾಡಲಾಗಿತ್ತು. ಇಂದು ರಾಜ್ಯದ ಹಾಗೂ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು ಎಂದು ಹೇಳಿದರು.

ನೂತನ ಪದಾಧಿಕಾರಿಗಳ ನೇಮಕ ಮಾಡುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಜವಾಬ್ದಾರಿ ವಹಿಸಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿ ದ್ವೇಷ ಬಿಟ್ಟು ದೇಶ ಕಟ್ಟಬೇಕು, ದ್ವೇಷವಿಲ್ಲದ ದೇಶ ಕಟ್ಟಬೇಕೇಂಬುದು ಪಕ್ಷದ ಉದ್ದೇಶವಾಗಿದೆ. ನಿಜವಾದ ಜಾತ್ಯತೀತ-ಧರ್ಮಾತೀತ ಪಕ್ಷ.
ಇದು ಹಿಂದೂ ಸಂಸ್ಕೃತಿಯ ನೆಲದಲ್ಲಿ ಹಿಂದುತ್ವವನ್ನು ಗೌರವಿಸುತ್ತಾ, ಅದನ್ನೇ ಅಳವಡಿಸಿಕೊಳ್ಳುತ್ತಾ, ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣುತ್ತಾ ಮುಂದೆ ನಡೆಯುವ ಪಕ್ಷ. ಹಿಂದೂ ಸಂಸ್ಕೃತಿಯ ಅಂತಃಸತ್ವವಾದ ‘ವಸುಧೈವ ಕುಟುಂಬಕಂ’ ತತ್ವವನ್ನು ಅಕ್ಷರಶಃ ಪಾಲಿಸುವ ಪಕ್ಷ ಎಂದು ತಿಳಿಸಿದರು.

ನಾವು ಜಾತಿಗಳ ಸಾಮರಸ್ಯ ಕಾಪಾಡಿಕೊಂಡು, ಧರ್ಮಸಮನ್ವಯದ ನಮ್ಮ ಮೂಲಭೂತ ಸಂಸ್ಕೃತಿಯನ್ನು ಉಳಿಸಿಕೊಂಡು ಪಕ್ಷ ಕಟ್ಟಲು ಹೊರಟಿದ್ದೇವೆ. ಬಸವಣ್ಣನವರ ಕನಸಿನ ಕಲ್ಯಾಣ ಕರ್ನಾಟಕದ ನಿರ್ಮಾಣವೇ ನಮ್ಮ ಗುರಿ ಎಂದು ತಿಳಿಸಿದರು.

ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಕೂಡ ಒಂದಂಕಿ ಸಂಖ್ಯೆಯಿಂದಲೇ ಪ್ರಾರಂಭವಾಗಿ ಲೋಕಸಭೆ ಮತ್ತು ವಿಧಾನಸಭೆಯನ್ನು ಪ್ರವೇಶ ಮಾಡಿರುವುದು ಇತಿಹಾಸ.

ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಳೆದ ಡಿಸೆಂಬರ್ 25 ರಂದು ಪ್ರಾರಂಭವಾಗಿ ಕೇಂದ್ರ ಚುನಾವಣಾ ಆಯೋಗದಿಂದ 15 ಮಾರ್ಚ್ 2023 ರಂದಷ್ಟೇ ನೊಂದಾಯಿತವಾಗಿದೆ.
ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ದೊರೆತ ಸಮಯ ಅತೀ ಕಡಿಮೆ.

2028ರ ವಿಧಾನಸಭೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಜ್ಯವನ್ನು ಸುತ್ತಿ ಜನ ಮನ ಗೆದ್ದು ಪಕ್ಷವನ್ನು ಅಧಿಕಾರಕ್ಕೆ ತರಲು ಪೂರ್ಣ ಪ್ರಮಾಣದ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಬೆಳಗಾವಿ ಉತ್ತರದ ಪ್ರವೀಣ್ ಹಿರೇಮಠ ಜಿಲ್ಲೆಯಲ್ಲಿ ಪಕ್ಷವನ್ನ ಕೆಳಮಟ್ಟದಿಂದ ಬಲಿಷ್ಠವಾಗಿ ಕಟ್ಟುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಪ್ರಗತಿ ಪಕ್ಷ ಗೆಲುವು ಸಾಧಸಲಿದೆ ಎಂದು ಹೇಳಿದರು ಹಾಗೂ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!