ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅಪ್ರಾಪ್ತರು ಸೇರಿ 6 ಮಂದಿ ಅಂದರ್

Published on

spot_img
spot_img

ಸ್ನೇಹಿತನೊಂದಿಗೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಹೋಗಿದ್ದ ಬಾಲಕಿಯ ಮೇಲೆ ಆಕೆಯ ಸ್ನೇಹಿತನೂ ಸೇರಿ ಆರು ಮಂದಿ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಕೇಸು ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಹೇಗಾಯ್ತು? ಸಂಪೂರ್ಣ ವರದಿ ಇಲ್ಲಿದೆ.

ಸೆಂಟ್ರಲ್ ಮುಂಬೈನ ಲೋವರ್ ಪರೇಲ್ ಪ್ರದೇಶದಲ್ಲಿ ಆರು ಮಂದಿ ಆರೋಪಿಗಳು 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಸ್ನೇಹಿತನೂ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಮೂವರು ಅಪ್ರಾಪ್ತರೆಂದು ತಿಳಿದುಬಂದಿದೆ.

ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಯ ಸ್ನೇಹಿತ. ಈ ಇಬ್ಬರೂ ಸೇರಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಚಾಲ್‌ ಎಂಬಲ್ಲಿಗೆ ಹೋಗಿದ್ದರು. ಇದೇ ಪ್ರದೇಶಕ್ಕೆ ಇತರೆ ಐವರು ಆರೋಪಿಗಳೂ ಬಂದಿದ್ದರು. ರಾತ್ರಿ ವೇಳೆ ಚಾಲ್‌ನ ನಿವಾಸಿಗಳು ಬಾಲಕಿಯ ಕೂಗು ಕೇಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಎನ್‌ ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲಕಿ ಮತ್ತು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಮೂವರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದು ಡೋಂಗ್ರಿಯಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!