ಅಂಬುಲೆನ್ಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್

WhatsApp Group Join Now
Telegram Group Join Now
Instagram Account Follow Now

ಭೂಪಾಲ್: ಅಂಬುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ (Madhya Pradesh) ಮೌಗಂಜ್‌ನಲ್ಲಿ (Mauganj) ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ.

ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ (Ambulance) ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಹೃದಯಾಘಾತದ ಮುನ್ಸೂಚನೆ ಇದು, ಈ ಲಕ್ಷಣಗಳು ಕಂಡರೆ ನಿರ್ಲಕ್ಷಿಸಲೇಬೇಡಿ.!

ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಅಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಈ 108 ಅಂಬುಲೆನ್ಸ್‌ನಲ್ಲೇ ಕೃತ್ಯ ನಡೆದಿದೆ.

ಡೆಪ್ಯುಟಿ ಇನ್ಸ್‌ಪೆಕ್ಟರ್‌ ಜನರಲ್ ಸಾಕೇತ್ ಪಾಂಡೆ ಮಾಹಿತಿ ಪ್ರಕಾರ, ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಅಂಬುಲೆನ್ಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಅಂಬುಲೆನ್ಸ್‌ನಲ್ಲಿದ್ದರು. ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಅಂಬುಲೆನ್ಸ್‌ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ : ದಿನ ಭವಿಷ್ಯ: ಅನಿರೀಕ್ಷಿತವಾಗಿ ಬರುವ ಹಣ ನಿಮ್ಮ ಕಷ್ಟಗಳನ್ನು ಕಡಿಮೆ ಮಾಡುತ್ತೆ, ವಿವಾದಗಳು ಇತ್ಯರ್ಥವಾಗುತ್ತವೆ

ಆ ದಿನ ರಾತ್ರಿ ಆಕೆಯನ್ನು ವಾಹನದಲ್ಲಿಯೇ ಇರಿಸಿಕೊಂಡು ಮಾರನೇ ದಿನ ರಸ್ತೆಯ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಬಳಿಕ ಅಪ್ರಾಪ್ತೆ ಮನೆ ತಲುಪಿದ್ದು, ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಇದ್ದರಿಂದ ಗಾಬರಿಯಾದ ತಾಯಿ ಮನೆಯ ಮರ್ಯಾದೆ ಪ್ರಶ್ನೆ ಎಂದು ದೂರು ದಾಖಲಿಸಿರಲಿಲ್ಲ.

ಇದನ್ನೂ ಓದಿ : ಈ ತಳಿ ಹಸು ಸಾಕಿದರೆ ದಿನಕ್ಕೆ 10 ಲೀಟರ್ ಹಾಲು ಪಕ್ಕಾ, ನಿಮ್ಮ ಆದಾಯ ಡಬಲ್ ಆಗುವುದು ಗ್ಯಾರಂಟಿ.!

ಬಳಿಕ ನ.25 ರಂದು ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ನ.27 ರಂದು ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಈ ಕೃತ್ಯದಲ್ಲಿ ಸಂತ್ರಸ್ತೆಯ ಸಹೋದರಿ ಹಾಗೂ ಮಾವ ಭಾಗಿಯಾಗಿರುವುದಾಗಿ ತಿಳಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಈ 5 ಟೀಮ್​ಗೆ ನಾಯಕರದ್ದೇ ಸಮಸ್ಯೆ.. KL ರಾಹುಲ್, ಕೊಹ್ಲಿ, ಪಂತ್, ಅಯ್ಯರ್ ಕ್ಯಾಪ್ಟನ್ ಆಗ್ತಾರಾ?

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿರುವುದಾಗಿ ದೃಢಪಟ್ಟಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now

Vivek Kudarimath, Chief Editor Vivekvarthe, Journalist, Video Editor, Content Writer, CEO Of VPG Digital Private Limited

Leave a Comment