ಹೋಟೆಲಿನಲ್ಲಿ‌ ನಾಲ್ವರು ಕಾಮುಕರಿಂದ ಗ್ಯಾಂಗ್‌ರೇಪ್‌ – ಸಹಾಯಕ್ಕಾಗಿ ಕಣ್ಣೀರಿಟ್ಟ ಸಂತ್ರಸ್ತೆ, ಐವರು ಅರೆಸ್ಟ್

Published on

spot_img
spot_img

ಆಗ್ರಾ: ನಾಲ್ವರು ಕಾಮುಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾ ಜಿಲ್ಲೆಯ ಹೋಟೆಲಿನಲ್ಲಿ  ನಡೆದಿದೆ.

25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೊವನ್ನು (Video) ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಆಕ್ಷೇಪಾರ್ಹ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್‌ (Black Mail) ಮಾಡಲಾಗುತ್ತಿತ್ತು. ಬಲವಂತವಾಗಿ ಮದ್ಯ ಸೇವಿಸಿ ಆಕೆಯ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪಗಳಲ್ಲದೆ, ಕೊಲೆ ಯತ್ನದ ಆರೋಪಗಳನ್ನು ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಹೋಟೆಲಿನ ಉದ್ಯೋಗಿಯಾಗಿದ್ದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಸಂತ್ರಸ್ತೆ ಸಹಾಯಕ್ಕಾಗಿ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!