spot_img
spot_img
spot_img
spot_img
spot_img
spot_img

ವಿಶೇಷ ವಿಸ್ಮಯಕ್ಕೆ ಸಾಕಿ ಆಗಲಿದೆ ಗವಿಗಂಗಾಧರೇಶ್ವರ ದೇವಾಲಯ: ಸೂರ್ಯರಶ್ಮಿ ಶಿವನನ್ನು ಸ್ಪರ್ಶಿಸುವ ಕ್ಷಣ!

Published on

spot_img

ಬೆಂಗಳೂರು: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ (Makar Sankranti)  ಆರಂಭವಾಗಿದೆ. ಸಂಕ್ರಾತಿ ದಿನದಂದೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

ಈ ದಿನ ಸೂರ್ಯರಶ್ಮಿ ಶಿವನನ್ನು ಸ್ಪರ್ಶಿಸುವ ವಿಶೇಷ ಕೌತುಕ ನಡೆಯಲಿದೆ. ಸೂರ್ಯ ದಕ್ಷಿಣಪಥ ದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವನ ಮೂರ್ತಿಯನ್ನು ಸ್ಪರ್ಶಿಸಲಿದ್ದಾನೆ. ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಹೊಸ ವರ್ಷದ ಭವಿಷ್ಯ ಇರಲಿದೆ ಅನ್ನೋದು ನಂಬಿಕೆ.

ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ಓಪನ್ ಇರಲಿದ್ದು, ನಂತ್ರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುದಿಲ್ಲ ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಮರ್ಶಿಸಿದ ನಂತ್ರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ

ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಇರಲಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಪ್ರಧಾನ ಆರ್ಚಕ ಸೋಮಸುಂದರ್ ದೀಕ್ಷೀತ್ ಮಾಹಿತಿ ನೀಡಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!