spot_img
spot_img
spot_img
spot_img
spot_img
spot_img

ಅಪಘಾತದಿಂದ ಯುವಕನ ಸಾವಿಗೆ ನಾನೇ ಕಾರಣ ಎಂದು ಆತ್ಮಹತ್ಯೆಗೆ ಶರಣಾದ!

Published on

spot_img

ವಿವೇಕವಾರ್ತೆ: ರಸ್ತೆ ಅಪಘಾತದಿಂದ ವಿದ್ಯಾರ್ಥಿಯ ಸಾವಿಗೆ ನಾನೇ ಕಾರಣ ಎಂದು ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ (Madikeri) ಹೆರವನಾಡಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ತಮ್ಮಯ್ಯ (57) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ಅಂತಿಮ ಡಿಗ್ರಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಎಂಬಾತನ ತಲೆಗೆ ತೀವ್ರ ಪೆಟ್ಟಾಗಿತ್ತು. ಈ ವೇಳೆ ಯುವಕನ ದೇಹ ಲಾರಿಗೂ ತಾಗಿದ್ದರಿಂದ ಆತ ತೀವ್ರ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

ಯುವಕನ ತಲೆಗೆ ತೀವ್ರ ಪೆಟ್ಟಾಗಿದೆ ಎಂದು ಕೇಳುತ್ತಲೇ ತಮ್ಮಯ್ಯರಿಗೆ ಪಶ್ಚಾತ್ತಾಪವಾಗಿದೆ. ನನ್ನಿಂದಾಗಿ ಒಬ್ಬ ಯುವಕನ ಸ್ಥಿತಿ ಹೀಗಾಯಿತು ಎಂದು ತೀವ್ರವಾಗಿ ನೊಂದಿದ್ದಾರೆ. ಅದೇ ನೋವಿನಿಂದ ತಮ್ಮಯ್ಯ ಕಾಕತಾಳಿಯ ಎಂಬಂತೆ, ಯುವಕ ಸಾವನ್ನಪ್ಪಿದ ಸಮಯದಲ್ಲೇ ನೇಣಿಗೆ ಶರಣಾಗಿದ್ದಾರೆ.

Related Content


ಅಪಘಾತ ಸಂಬಂಧ ಮಡಿಕೇರಿ ಸಂಚಾರಿ ಠಾಣೆಯಲ್ಲಿ, ಆತ್ಮಹತ್ಯೆ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...
error: Content is protected !!