ವಿವೇಕವಾರ್ತೆ : ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಕವಿನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ.
ಹೆಡ್ ಕಾನ್‌ಸ್ಟೇಬಲ್ ಕವಿನ್ ವಾಹನವೊಂದನ್ನು ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಶಿವಕುಮಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡು ಹೆಡ್ ಕಾನ್‌ಸ್ಟೇಬಲ್ ಕವಿನ್ ಅವರು 20 ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಇನ್ನು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.