spot_img
spot_img
spot_img
spot_img
spot_img
spot_img

ಹೆಬ್ಬಾಳಕರ ಅವರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕು : ಡಾ.ಪುನೀತ ರಾಜಕುಮಾರ ಅಭಿಮಾನಿ ಬಳಗ

Published on

spot_img

ಚಿಕ್ಕೋಡಿ :– ಕರವೇ ಡಾ|| ಪುನೀತ್ ರಾಜಕುಮಾರ ಅಭಿಮಾನಿಗಳ ಬಳಗ ದಿಂದ ಉಪವಿಭಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಕೆ,

ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ ಮೂಲಕ, ಕರ್ನಾಟಕದ ಕನ್ನಡಿಗರ ಸಾರ್ವಭೌಮತ್ವ ಹಾಗೂ ಗಡಿನಾಡು ಭಾಷಾ ಸಾಮರಸ್ಯಕ್ಕೆ ಧಕ್ಕೆ ಮೂಡಿಸಿದ್ದಾರೆ, ಕನ್ನಡತಿ ಎಂದು ಹೇಳಿಕೊಳ್ಳುವ ಇವರು ಚುನಾವಣೆ ಸಂದರ್ಭದಲ್ಲಿ ಮತಕ್ಕೋಸ್ಕರ ಕನ್ನಡ ಪ್ರೀತಿ ತೋರಿಸುವ ಇವರು, ವಿವಾದಾತ್ಮಕ ಹೇಳಿಕೆ ನೀಡಿ ಬೆಂಕಿ ಹಚ್ಚುವ ಸಾಹಸಕ್ಕೆ ಕೈ ಹಾಕಿರುವುದು ರಾಜಕೀಯ ಹುನ್ನಾರವಲ್ಲದೆ ಬೇರೇನೂ ಅಲ್ಲ ಎಂದು ಕರವೇ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಅಮೂಲ ನಾವಿ ಇವರು ಸಚಿವರ ಹೇಳಿಕೆಯನ್ನು ಖಂಡಿಸಿದ್ದಾರೆ, ತಕ್ಷಣ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದ್ದಾರೆ, ಚಿಕ್ಕೋಡಿ ಪಟ್ಟಣದಲ್ಲಿ ಇರುವಂತ ಎಲ್ಲಾ ಅಂಗಡಿ ಮುಗ್ಗಟ್ಟುಗಳ ಮೇಲೆ ಇರುವಂತಹ ಆಂಗ್ಲ, ಮರಾಠಿ, ಹಿಂದಿ ನಾಮಫಲಕಗಳನ್ನು ತೆಗೆಯಬೇಕು, ಕರ್ನಾಟಕ ರಾಜ್ಯ ಸರ್ಕಾರದ ಆದೇಶ ಇದ್ದರೂ ಸಹ ಅಂಗಡಿ ಮಾಲೀಕರು ಆದೇಶ ಪಾಲನೆಗೆ ಮುಂದಾಗುತ್ತಿಲ್ಲ, ನಾವು ಸುಮಾರು ಸಲ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಪ್ರಯೋಜನವಾಗುತ್ತಿಲ್ಲ, ಆದ್ದರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಎಲ್ಲಾ ಅಂಗಡಿಗಳ ಮೇಲೆ ಮತ್ತು ವಾಣಿಜ್ಯ ಸಂಘ ಸಂಸ್ಥೆಗಳ ಮೇಲೆ ಕಡ್ಡಾಯವಾಗಿ ಶೇಕಡಾ 60% ರಷ್ಟು ಭಾಗ ಕನ್ನಡವಾಗಿರಬೇಕು, ನಂತರ ಉಳಿದ ಭಾಷೆ ಇರಬೇಕು ಎಂದು ಸುಗ್ರೀವಾಜ್ಞೆ ತಂದಿದೆ, ಇದರ ಪ್ರಕಾರ ಚಿಕ್ಕೋಡಿ ತಾಲೂಕಿನ ಎಲ್ಲಾ ಅಂಗಡಿ ಮಾಲೀಕರಿಗೆ ನೋಟಿಸು ಮೂಲಕ ಶೇಕಡಾ 60 ರಷ್ಟು ಕನ್ನಡ ನಾಮಫಲಕ ಆಗಬೇಕೆಂದು ಅವರಿಗೆ ತಿಳಿಸಬೇಕೆಂದು ಕೇಳಿಕೊಂಡರು. ಈ ಸಂದರ್ಭದಲ್ಲಿ ಸಚಿನ್ ಸನದಿ, ಶಿವರಾಜ ಸನದಿ, ಅಮರ್ ಕಾಂಬಳೆ, ಲವಕುಶ ಸನದಿ, ಪ್ರವೀಣ ವಡೇರ್, ಕುಮಾರ್ ನಾಯಿಕ, ವಿಠ್ಠಲ ಖಿಲಾರೆ, ಅರಿಹಂತ ಹಜಾರೆ, ರಾಹುಲ ಕಾಡಾಪುರ, ವಿಶ್ವನಾಥ್ ಪಾಟೀಲ, ಸಾಗರ ಪಾಟೀಲ ಸೌರಭ ಹಿರೇಮಠ ಹಾಗೂ ನೂರಾರು ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!