Honor Killing: ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ?: ಮಗಳನ್ನೇ ಕತ್ತು ಕುಯ್ದು ತಂದೆಯಿಂದಲೇ ಕೊಲೆ!

Published on

spot_img
spot_img

ವಿವೇಕವಾರ್ತೆ: ತನ್ನ ಮಗಳ ಪ್ರೀತಿಯಿಂದ ಮನನೊಂದು ತಂದೆ ಮರ್ಯಾದೆಗೆ ಅಂಜಿ ಮಗಳನ್ನೇಕೊಲೆ ಮಾಡಿದ ಘಟನೆ ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ  ನಡೆದಿದೆ. ಮಗಳ ಪ್ರೀತಿ ವಿಚಾರ ತಿಳಿದ ತಂದೆ, ಮರ್ಯಾದೆ ತೆಗೆದಳು ಅಂತ ಕೊಲೆಯೇ ಮಾಡಿದ್ದಾನೆ.

ಕವನಾ (20) ಹತ್ಯೆಯಾದ ಯುವತಿ. ತನ್ನ ಮಗಳನ್ನು ಹತ್ಯೆಗೈದ ಬಳಿಕ ಆರೋಪಿ ಮಂಜುನಾಥ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಂಜುನಾಥ್ ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!