ಮಕ್ಕಳಾಗಲಿಲ್ಲ ಎಂಬ ವಿಷಯಕ್ಕೆ ಹೆಂಡತಿಯ ಕೈ ಕಾಲು ಮುರಿದು ಹಾಕಿದ ಪಾಪಿ ಪತಿ..! ಮಹಿಳೆಯ ಸ್ಥಿತಿ ಚಿಂತಾಜನಕ

Published on

spot_img
spot_img

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಪತಿರಾಯನೊಬ್ಬ ಕೋಪದಲ್ಲಿ ಪತ್ನಿಯ ಕೈ – ಕಾಲು ಮುರಿದು ಹಾಕಿದ್ದಾನೆ.

ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಮತ್ತು ಆತನ ಕುಟುಂಬಸ್ಥರ ಮೇಲೆ ದೂರು ದಾಖಲಿಸಲಾಗಿದೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಾನುಗೊಂಡಲ್​ ಎಂಬಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ. ಮೂರು ವರ್ಷಗಳ ಹಿಂದೆ ಆರೋಪಿ ಲಾಲಪ್ಪ ಮತ್ತು ಸಂತ್ರಸ್ತೆ ಆದಿಲಕ್ಷ್ಮಿಗೆ ವಿವಾಹವಾಗಿತ್ತು. ಅಂದಿನಿಂದಲೂ ಒಂದಲ್ಲಾ, ಒಂದು ಕಾರಣಕ್ಕೆ ಪತ್ನಿಯ ಜೊತೆಗೆ ಪತಿ ಕಿತ್ತಾಡುತ್ತಲೇ ಇದ್ದ. ಮಂಗಳವಾರ ಕೋಪಿಷ್ಠ ಲಾಲಪ್ಪ ವಿವಾಹವಾಗಿ ಮೂರು ವರ್ಷವಾದರೂ ಮಗು ಹೆತ್ತಿಲ್ಲ. ನೀನು ಬಂಜೆ ಎಂದು ನಿಂದಿಸಿ ಹಲ್ಲೆ ನಡೆಸಿದ್ದಾನೆ.

ಅಷ್ಟಕ್ಕೆ ಬಿಡದೇ ಒಂದು ಕೈ- ಕಾಲನ್ನೂ ಮುರಿದಿದ್ದಾನೆ. ಇದಕ್ಕೆ ಕುಟುಂಬಸ್ಥರು ಕೂಡ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆ ನೋವಿನಿಂದ ಒದ್ದಾಡಿ ಮೂರ್ಛೆ ಹೋಗಿದ್ದಾರೆ. ಬಳಿಕ ವಿಷಯ ತಿಳಿದ ಮಹಿಳೆಯ ಕುಟುಂಬಸ್ಥರು ಮನೆಗೆ ಧಾವಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂತ್ರಸ್ತೆಯ ಪೋಷಕರು ನೀಡಿದ ಮಾಹಿತಿಯ ಪ್ರಕಾರ, ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಮಗಳಿಗೆ ಅಳಿಯ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ತಿಳಿ ಹೇಳಿದರೂ ಕೇಳದೇ ಹಲ್ಲೆ ಮಾಡುತ್ತಿದ್ದ. ಮಂಗಳವಾರ ಆಕೆಯ ಕೈ ಕಾಲು ಮುರಿದು ಕ್ರೂರತ್ವ ಮೆರೆದಿದ್ದಾನೆ. ಇದನ್ನೂ ಕಂಡೂ ಕಾಣದಂತಿದ್ದ ಕುಟುಂಬಸ್ಥರು ಬೆಂಬಲಿಸಿದ್ದಾರೆ. ಮಗಳ ಮೇಲೆ ದೌರ್ಜನ್ಯ ಎಸಗಿದ ಆರೋಪಿ ಮತ್ತು ಕುಟುಂಬಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!