ICC world cup 2023 : ಭಾರತ- ಅಫ್ಘಾನ್ ಪಂದ್ಯದ ವೇಳೆ ಫ್ಯಾನ್ಸ್ʼಗಳ ನಡುವೆ ಬಡಿದಾಟ ; ವಿಡಿಯೋ ವೈರಲ್.!

Published on

spot_img
spot_img

ವಿವೇಕವಾರ್ತೆ : ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ (ICC world cup 2023) ವಿಶ್ವಕಪ್ ಕದನದಲ್ಲಿ ನಿರೀಕ್ಷಿತ ಫಲಿತಾಂಶ ಹೊರಬಿದ್ದಿದ್ದು, ಅಫ್ಘಾನಿಸ್ತಾನ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ನೀಡಿದ 273 ರನ್​ಗಳ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಶತಕ ಸಿಡಿಸಿದರೆ, ಉಪನಾಯಕ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದರು.

ಪಂದ್ಯದಲ್ಲಿ ಇವರಿಬ್ಬರ ಅಮೋಘ ಪ್ರದರ್ಶನದಿಂದಾಗಿ ಭಾರತ ಇನ್ನೂ 15 ಓವರ್​ಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಈ ಮಧ್ಯ ಇದೇ ಪಂದ್ಯ ನಡೆದ ಸಂದರ್ಭದಲ್ಲಿ ಅಭಿಮಾನಿಗಳ ನಡುವಿನ ಮುಷ್ಠಿ ಯುದ್ಧದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಕೆಲವರು ಇದು ವಿರಾಟ್ ಕೊಹ್ಲಿ (Virat Kohli) ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅಭಿಮಾನಿಗಳ ನಡುವಿನ ಕದನ ಎಂದು ಬಿಂಬಿಸುವ ಮೂಲಕ ಈ ಜಗಳವನ್ನು ಮತ್ತಷ್ಟು ಸುದ್ದಿಯಾಗಿಸಿದ್ದಾರೆ.

ವಾಸ್ತವವಾಗಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಕದನದಲ್ಲಿ ವಿರಾಟ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಹೇಗೆ ಮುಖಾಮುಖಿಯಾಗುತ್ತಾರೆ ಎಂದು ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದರು. ಆದರೆ, ಪಂದ್ಯದ ವೇಳೆ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು, ಹಸ್ತಲಾಘವ ಮಾಡಿ ಎಲ್ಲಾ ವಿವಾದಗಳಿಗೆ ತೆರೆ ಎಳೆದರು.

ಇದರ ಜೊತೆಗೆ ಪಂದ್ಯದ ನಂತರ ಮಾತನಾಡಿದ ನವೀನ್, ವಿರಾಟ್‌ರನ್ನು ಹಾಡಿ ಹೊಗಳಿದರೆ, ಕೊಹ್ಲಿ ಕೂಡ ನವೀನ್​ರನ್ನು ಟಾರ್ಗೆಟ್ ಮಾಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದರು. ಹೀಗಾಗಿ ಈ ಇಬ್ಬರ ನಡುವಿನ ಸೋಶಿಯಲ್ ಮೀಡಿಯಾ ವಾರ್ ಸುಖಾಂತ್ಯ ಕಂಡಿತು. ಆದರೆ ಇದೇ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕುಳಿತಿದ್ದ ಪ್ರೇಕ್ಷಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಪ್ರಕಾರ ಗಂಭೀರ್ ಮತ್ತು ಕೊಹ್ಲಿ ಅಭಿಮಾನಿಗಳ ನಡುವೆ ಈ ಹೊಡೆದಾಟ ನಡೆದಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂತಹ ಕಾಳಗಕ್ಕೆ ಇತಿಹಾಸವೇ ಇದೆ. ಇಲ್ಲಿ ಪಂದ್ಯ ನಡೆದಾಗಲೆಲ್ಲಾ ಇಂತಹ ಘಟನೆಗಳು ನಡೆಯುವುದು ಸಹಜ. ನವೀನ್ ಉಲ್ ಹಕ್ ಮತ್ತು ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಜಗಳವಾಡಿದಾಗ ಕೊಹ್ಲಿ, ಗೌತಮ್ ಗಂಭೀರ್ ಅವರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದರು.

ಆ ಬಳಿಕ ಕೊಹ್ಲಿ ಅಭಿಮಾನಿಗಳು ಅವಕಾಶ ಸಿಕ್ಕಾಗಲೆಲ್ಲ ಗಂಭೀರ್‌ರ ಕಾಲೆಳೆಯುವುದು ಹಲವು ಬಾರಿ ಕಂಡು ಬಂದಿದೆ. ಇಂದೂ ಕೂಡ ನವೀನ್ ಉಲ್ ಹಕ್ ಬ್ಯಾಟಿಂಗ್​ಗೆ ಬಂದಾಗ ಇಡೀ ಕ್ರೀಡಾಂಗಣ ಕೊಹ್ಲಿ ಕೊಹ್ಲಿ ಎಂದು ಜೈಕಾರ ಕೂಗುತ್ತಿತ್ತು.

https://twitter.com/i/status/1712142029185069261

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!