spot_img
spot_img
spot_img
spot_img
spot_img
spot_img

ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದುಮಡಿ

Published on

spot_img

ವಿವೇಕವಾರ್ತೆ: ಪತಿಯೊಂದಿಗೆ ಅಕ್ರಮ ಸಂಬಂಧ (Illicit Relationship ) ಹೊಂದಿದ್ದಕ್ಕೆ ಗೆಳತಿಯ ಮನೆಗೆ ನುಗ್ಗಿ ಪತ್ನಿ ಮತ್ತು ಸಂಬಂಧಿಕರು ದಾಂಧಲೆ ನಡೆಸಿದ ಘಟನೆ ಮಾರುತಿ ಲೇಔಟ್ ಬಿಳೇಶಿವಾಲೆ ದೊಡ್ಡಗುಬ್ಬಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಪ್ರತಿಮಾ(ಹೆಸರು ಬದಲಾಯಿಸಲಾಗಿದೆ) ಕಳೆದ ಮೂರು ವರ್ಷಗಳ ಹಿಂದೆ ತನಗೆ ಆತ್ಮೀಯರಾಗಿದ್ದ ಶರಣ್ ಎಂಬುವರ ಬಳಿ ಮನೆ (House) ಕಟ್ಟಿಸುವಾಗ ಜಲ್ಲಿ, ಎಂ ಸ್ಯಾಂಡ್, ಬ್ಲಾಕ್ಸ್‌ಗಳನ್ನು ಖರೀದಿ ಮಾಡಿದ್ದಾರೆ. ಖರೀದಿ ಮಾಡುವಾಗ ನಗದು ರೂಪದಲ್ಲಿ ಶರಣ್ ಅವರಿಗೆ ಹಣವನ್ನು ಕೊಟ್ಟಿದ್ದಾರೆ. ನಂತರ ಇವರಿಬ್ಬರ ನಡುವೆ ಉತ್ತಮ ಸಂಬಂಧ ಬೆಳೆದಿದೆ.

ಇವರಿಬ್ಬರ ಮಾತುಕತೆ ನೋಡಿ ಶರಣ್‌ ಪತ್ನಿ ಸಮಂತಾ ನನ್ನ ಗಂಡನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ಯಾ ಎಂದು ಪ್ರಶ್ನಿಸಿ ಪ್ರತಿಮಾ ಜೊತೆ ಗಲಾಟೆ ಮಾಡಿದ್ದರು. ಈ ಗಲಾಟೆಯ ನಂತರ ಶರಣ್‌ ಮತ್ತು ಪ್ರತಿಮಾ ಮಾತನಾಡುವುದನ್ನು ಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಮಾಲ್‌ ಒಂದರಲ್ಲಿ ಪ್ರತಿಮಾ ಜೊತೆ ಶರಣ್‌ ಇರುವುದನ್ನು ಪತ್ನಿ ಸಮಂತಾ ನೋಡಿದ್ದಾಳೆ.

ಮತ್ತೆ ಸಂಬಂಧ ಉತ್ತಮಗೊಂಡಿರುವುದನ್ನು ನೋಡಿ ಸಮಂತಾ ಫೆ.2ರ ರಾತ್ರಿ 11:30ರ ವೇಳೆಗೆ ಕೆಂಪರಾಜು, ಶರತ್ ಜೊತೆ ಯುವತಿ ಮನೆಗೆ ನುಗ್ಗಿ ದಾಂಧಲೆ ಮಾಡಿ ಗಾಜು, ಪೀಠೋಪಕರಣಗಳನ್ನು ಒಡೆದು ಹಾಕಿದ್ದಾರೆ.

ಈಗ ಪ್ರತಿಮಾ ಗಲಾಟೆಯಿಂದ ನನಗೆ ಲಕ್ಷಾಂತರ ರೂ. ನಷ್ಟವಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಎಫ್‌ಐಆರ್‌ ಆಗಿದ್ದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಪ್ರತಿಮಾ ಆರೋಪಿಸಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!