spot_img
spot_img
spot_img
spot_img
spot_img
spot_img

ಏಷ್ಯನ್‌ ಗೇಮ್ಸ್‌ʼನಲ್ಲಿ ಚಿನ್ನ, ಬೆಳ್ಳಿ, ಕಂಚು ಸೇರಿ ಒಟ್ಟು 107 ಪದಕ ಬಾಚಿಕೊಂಡ ಭಾರತ!

Published on

spot_img

ವಿವೇಕವಾರ್ತೆ: ಚೀನಾದ‌ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಆವೃತ್ತಿಯ ಏಷ್ಯನ್‌ ಗೇಮ್ಸ್‌ಗೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿದ್ದು, ಭಾರತ ಅದ್ಭುತ ಸಾಧನೆಯೊಂದಿಗೆ ವಿದಾಯ ಹೇಳಿದೆ. ಏಷ್ಯನ್‌ ಗೇಮ್ಸ್‌ನ ಧ್ವಜವನ್ನು ಮುಂದಿನ ಅತಿಥೇಯ ನಗರವಾದ ದೋಹಾ, ಕತಾರ್‌ಗೆ ಹಸ್ತಾಂತರಿಸುವ ನಿರೀಕ್ಷೆಯಿದ್ದು, 2027ಕ್ಕೆ ದೋಹಾದಲ್ಲಿ ಏಷ್ಯನ್‌ ಗೇಮ್ಸ್‌ ನಡೆಯಲಿದೆ.

ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಶತಕ ಬಾರಿಸಿದೆ. ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ, ಕಂಚು ಸೇರಿ ಒಟ್ಟು 107 ಪದಕಗಳನ್ನ ಬಾಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಭಾರತದ ಕ್ರೀಡಾಪಟುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಮೋದಿ, ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಸಾಧನೆಯೊಂದಿಗೆ ವಿದಾಯ ಹೇಳಿದೆ. ನಮ್ಮ ಅಸಾಧಾರಣ ಕ್ರೀಡಾಪಟುಗಳು 107 ಪದಕಗಳನ್ನು ತಂದುಕೊಟ್ಟಿದ್ದಾರೆ. ಕಳೆದ 60 ವರ್ಷಗಳಲ್ಲಿ ಅದ್ಭುತ ಸಾಧನೆ ಮಾಡಿದ್ದು, ಇಡೀ ರಾಷ್ಟ್ರವೇ ಹರ್ಷಗೊಂಡಿದೆ. ನಮ್ಮ ಕ್ರೀಡಾಪಟುಗಳ ಅಸಾಧಾರಣ ಪ್ರತಿಭೆ, ಕಠಿಣ ಪರಿಶ್ರಮ ದೇಶಕ್ಕೆ ಹೆಮ್ಮೆ ತಂದಿದೆ. ಅವರ ವಿಜಯ ಮಾಲೆ ನೆನಪಿಡುವ ಕ್ಷಣಗಳನ್ನ ಕಲ್ಪಿಸಿದೆ ಎಂದು ಶ್ಲಾಘಿಸಿದ್ದಾರೆ.

ಏಷ್ಯನ್‌ ಗೇಮ್ಸ್‌ನಲ್ಲಿ ಒಟ್ಟು 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚಿನ ಪದಕಗಳೊಂದಿಗೆ 107 ಪದಕಗಳನ್ನು ಗೆದ್ದುಕೊಂಡಿದೆ. ಈ ಮೂಲಕ 19ನೇ ಆವೃತ್ತಿಯ ಏಷ್ಯನ್‌ ಗೇಮ್ಸ್‌ನಲ್ಲಿ ಹೆಚ್ಚಿನ ಪದಕ ಪಡೆದ 4ನೇ ರಾಷ್ಟ್ರವಾಗಿ ಹೊರಹೊಮ್ಮಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!