spot_img
spot_img
spot_img
spot_img
spot_img
spot_img

Indian Air Force: 2016ರಲ್ಲಿ 29 ಸಿಬ್ಬಂದಿಯೊಂದಿಗೆ ನಾಪತ್ತೆಯಾಗಿದ್ದ ವಾಯುಪಡೆ ವಿಮಾನದ ಅವಶೇಷ ಪತ್ತೆ..!

Published on

spot_img

ನವದೆಹಲಿ: 2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ (IAFs AN-32 Aircraft) ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದೇ ವಿಮಾನದಲ್ಲಿ ಮಂಗಳೂರಿನ ಗುರುವಾಯನಕೆರೆಯ ಯೋಧ ಏಕನಾಥ ಶೆಟ್ಟಿ (Eknath Shetty) ಕೂಡ ಇದ್ದರು.

ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿಯು ವಿಮಾನವನ್ನು ಪತ್ತೆಹಚ್ಚಲು ಸ್ವಾಯತ್ತ ನೀರೊಳಗಿನ ವಾಹನವನ್ನು (AUV) ಬಳಸಿದೆ. ಅಪಘಾತಕ್ಕೀಡಾಗಿದ್ದ ವಿಮಾನದ ಅವಶೇಷಗಳು ಚೆನ್ನೈ ಕರಾವಳಿಯಿಂದ ಸರಿಸುಮಾರು 140 ನಾಟಿಕಲ್ ಮೈಲುಗಳಷ್ಟು (ಅಂದಾಜು 310 ಕಿಮೀ) ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಶೋಧದ ಚಿತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. An-32 ವಿಮಾನ ಎನ್ನುವುದಕ್ಕೆ ಸಾಕಷ್ಟು ಪುರಾವೆ ಸಿಕ್ಕಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. 

ಬಹು-ಬೀಮ್ ಸೋನಾರ್, ಸಿಂಥೆಟಿಕ್ ಅಪರ್ಚರ್ ಸೋನಾರ್ ಮತ್ತು ಹೈ-ರೆಸಲ್ಯೂಶನ್ ಛಾಯಾಗ್ರಹಣ ಸೇರಿದಂತೆ ಬಹು ಪೇಲೋಡ್‌ಗಳನ್ನು ಬಳಸಿಕೊಂಡು 3,400 ಮೀ ಆಳದಲ್ಲಿ ಹುಡುಕಾಟ ನಡೆಸಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಘಟನೆ ಏನು?
2016 ರ ಜು.22 ರಂದು ಚೆನ್ನೈಯ ತಾಂಬರಂ ಏರ್‌ಬೇಸ್‌ನಿಂದ ಅಂಡಮಾನ್‌ನ ಪೋರ್ಟ್‌ಬ್ಲೇರ್‌ ನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಸೇನೆಯ ಎಎನ್‌-32 ಯುದ್ಧ ವಿಮಾನ ನಿಗೂಢವಾಗಿ ಕಣ್ಮರೆಯಾಗಿತ್ತು. ಚೆನ್ನೈನ ತಾಂಬರಂನಿಂದ ಬೆಳಿಗ್ಗೆ 8:30 ಕ್ಕೆ ಟೇಕ್ ಆಫ್ ಆಗಿತ್ತು. ಆದರೆ ಕೊಲ ಹೊತ್ತಿನಲ್ಲೇ ಸಂಪರ್ಕ ಕಳೆದುಕೊಂಡಿತ್ತು. ಕೊನೆಯ ಬಾರಿಗೆ 16 ನಿಮಿಷಗಳ ನಂತರ ಸಂಪರ್ಕಿಸಲಾಗಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿತ್ತು. 

29 ಮಂದಿ ಯೋಧರು ಕಣ್ಮರೆ
ಈ ಯುದ್ಧ ವಿಮಾನದಲ್ಲಿ 29 ಮಂದಿ ಯೋಧರಿದ್ದರು. ಈ ಯೋಧರ ಪೈಕಿ ಕರ್ನಾಟಕದ ಏಕೈಕ ಯೋಧ ಏಕನಾಥ ಶೆಟ್ಟಿ ಕೂಡ ಕಣ್ಮರೆಯಾಗಿದ್ದರು. ಐಎಎಫ್‌ನ ನಾಪತ್ತೆಯಾದ ವಿಮಾನದಲ್ಲಿದ್ದವರು ಸತ್ತಿರಬಹುದು ಎಂದು ವಿಚಾರಣೆ ವೇಳೆ ನ್ಯಾಯಾಲಯ ತೀರ್ಮಾನಿಸಿತ್ತು. ವಿಮಾನವು ನೀರೊಳಗಿನ ಲೊಕೇಟರ್ ವ್ಯವಸ್ಥೆಯನ್ನು ಹೊಂದಿರಲಿಲ್ಲ. ಇದು ಹುಡುಕಾಟವನ್ನು ಕಷ್ಟಕರವಾಗಿಸಿತ್ತು. ವಿಮಾನ ಪತ್ತೆಗಾಗಿ ಕೇಂದ್ರ ಸರ್ಕಾರ ಮತ್ತು ಮಿಲಿಟರಿ ತಜ್ಞರು 3 ತಿಂಗಳು ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆಗಾಗಿ ಪಿ-8ಎ, ಮೂರು ಡೋರ್ನಿಯರ್‌ ವಿಮಾನ, ಜಲಾಂತರ್ಗಾಮಿ, ನೌಕಾ ಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!