ವಿವೇಕವಾರ್ತೆ : ಇತ್ತೀಚೆಗಷ್ಟೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಜಯರಾಮ್ ರಾಯಪುರ ಅವರನ್ನು ಕಾರವಾರದಲ್ಲಿರುವ ಕರ್ನಾಟಕ ಬಂದರು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ಜನನ-ಮರಣ ವಿಭಾಗದ ನೋಂದಣಾಧಿಕಾರಿಯೂ ಆಗಿರುವ ಹೆಚ್ಚುವರಿ ನಿರ್ದೇಶಕ ಎಂ. ಮಾದೇಶು ಅವರಿಗೆ ಬಡ್ತಿ ನೀಡಿ, ಎನ್. ಮಾಧುರಾಂ ಅವರ ನಿವೃತ್ತಿಯಿಂದ ತೆರವಾದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ.