WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೂರ್ವ ರೈಲ್ವೆ (Eastern Railway) ತನ್ನ ನೇಮಕಾತಿ ಕೋಶ (RRC) ಮುಖಾಂತರ 3115 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 14 ರಿಂದ ಆರಂಭವಾಗಿ ಸೆಪ್ಟೆಂಬರ್ 13, 2025 ರವರೆಗೆ ಮುಂದುವರಿಯಲಿದೆ.
ನಟ ದರ್ಶನ ಎಸ್ಕೇಪ್..? ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ನಟ ಹೋಗಿದ್ದು ಎಲ್ಲಿಗೆ?
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcer.org ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಮತ್ತು ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಹತಾ ಮಾನದಂಡಗಳು:
- ಕನಿಷ್ಠ ಶೇ. 50 ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣ ಆಗಿರಬೇಕು.
- ಸಂಬಂಧಿತ ಟ್ರೇಡ್ನಲ್ಲಿ NCVT/SCVT ಮಾನ್ಯತಾ ಪಡೆದ ನ್ಯಾಷನಲ್ ಟ್ರೇಡ್ ಸೆರ್ಟಿಫಿಕೇಟ್ ಹೊಂದಿರಬೇಕು.
- ವಯೋಮಿತಿ: ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ.
- OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ ಇದೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ₹100
- SC/ST/ಮಹಿಳೆ/ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವಿಲ್ಲ.
- ಹೆಚ್ಚಿನ ಮಾಹಿತಿಗಾಗಿ ಮತ್ತು ವಿವರವಾದ ಅಧಿಸೂಚನೆ ವೀಕ್ಷಿಸಲು rrcer.org ಗೆ ಭೇಟಿ ನೀಡಬಹುದು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now