ವಿವೇಕವಾರ್ತೆ;- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ವಿಮಾನದ ಶೌಚಾಲಯದ ವಾಶ್ ಬೇಸಿನ್ನಲ್ಲಿ ಅಡಗಿಸಿ ಇಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣವನ್ನು ಭೇದಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಅಕ್ರಮವಾಗಿ ಸಾಗಿಸಲು ಬಚ್ಚಿಡಲಾಗಿದ್ದ ಚಿನ್ನ ಪತ್ತೆ ಮಾಡಲಾಗಿದೆ. 3.2 ಕೆಜಿ ತೂಕದ 1.8 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಿಮಾನವನ್ನು ತಪಾಸಣೆ ನಡೆಸಿದಾಗ ವಿಮಾನದ ಶೌಚಾಲಯದ ವಾಶ್ ಬೆಸಿನ್ನಲ್ಲಿ ಅಡಗಿಸಿ ಇಟ್ಟಿದ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ನಲ್ಲಿ ಚಿನ್ನದ ತುಂಡುಗಳು ಸಿಕ್ಕಿವೆ.