spot_img
spot_img
spot_img
spot_img
spot_img
spot_img

Kidnap Case: ಭಿಕ್ಷೆ ಬೇಡುತ್ತಿದ್ದ ಬಾಲಕಿ ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು : ಸಿಕ್ಕಿಬಿದ್ದಿದ್ದೇ ರೋಚಕ!

Published on

spot_img

ವಿವೇಕವಾರ್ತೆ: ನಾಲ್ವರು ಕಾಮಾಂಧ ಮುಸ್ಲಿಂ ಯುವಕರು ಭಿಕ್ಷೆ ಬೇಡುತ್ತಿದ್ದ ಬಾಲಕಿಯೊಬ್ಬಳನ್ನು  ಅಪಹರಿಸಿ ಕೊನೆಗೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಭಯಾನಕ ಘಟನೆಯೊಂದು ಕೊಳ್ಳೇಗಾಲ ನಗರದಲ್ಲಿ ನಡೆದಿದೆ.

ಈ ಕಿರಾತಕರು ಕೇರಳದ ಮಲಪ್ಪುರಂ ಜಿಲ್ಲೆಯವರೆಂದು ತಿಳಿದುಬಂದಿದ್ದು, ಮಾರ್ಗ ಮಧ್ಯೆ ಸ್ಥಳೀಯರು ತಡೆದು ಚೆನ್ನಾಗಿ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕೇರಳದ ಮಲಪ್ಪುರಂನ ಈ ದುಷ್ಟರು ಪ್ರವಾಸಕ್ಕೆಂದು ಚಾಮರಾಜ ನಗರದಿಂದ ತಮಿಳುನಾಡಿಗೆ ಹೊರಟಿದ್ದರು. ದಾರಿ ಮಧ್ಯೆ ಅವರಿಗೆ ಕೊಳ್ಳೇಗಾಲದಲ್ಲಿ ಅಮಾಯಕಿಯಂತಿದ್ದ, ಭಿಕ್ಷೆ ಬೇಡುತ್ತಿದ್ದ ಬಾಲಕಿಯೊಬ್ಬಳು ಕಂಡಿದ್ದಾಳೆ. ಆಕೆಯ ಮೇಲೆ ಮೇಲೆ ಕಣ್ಣು ಹಾಕಿದ ದುಷ್ಟರು ಆಕೆಯನ್ನು ಯಾರಿಗೂ ಗೊತ್ತಾಗದಂತೆ ಕಾರಿನೊಳಗೆ ಎಳೆದುಕೊಂಡು ಅಪಹರಣ ಮಾಡಿದ್ದಾರೆ.

ಘಟನೆಯ ವಿವರ

ನಾಲ್ವರು ಮುಸ್ಲಿಂ ಯುವಕರು ಹೀಗೆ ಬಾಲಕಿಯನ್ನು ಕಾರಿನಲ್ಲಿ ಎತ್ತಾಕಿಕೊಂಡು ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ಪಾದಚಾರಿಯೊಬ್ಬನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕವೂ ಕಾರು ಪರಾರಿ ಆಗಲು ಯತ್ನಿಸಿದಾಗ ಸ್ಥಳೀಯರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿ ಬಾಲಕಿ ಇರುವುದು ಪತ್ತೆಯಾಗಿದೆ. ವಿಚಾರಿಸಿದಾಗ ಬಾಲಕಿಯನ್ನು ಅಪಹರಿಸಿರುವುದು ಗೊತ್ತಾಗಿದೆ. ಆಗ ಊರಿನವರು ಸೇರಿ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿ ನರಸೀಪುರ ಮೂಲದವಳಾಗಿದ್ದು, ಕೊಳ್ಳೇಗಾಲದಲ್ಲಿ ಭಿಕ್ಷೆ ಬೇಡಿಕೊಂಡು ಜೀವನ ನಡೆಸುತ್ತಿದ್ದಳು. ಇದೀಗ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ರಿಮ್ಯಾಂಡ್‌ ಹೋಮ್‌ಗೆ ಕಳಹಿಸಿದ್ದಾರೆ.

ಅಪಹರಣಕ್ಕೆ ಯತ್ನಿಸಿದ ಕೇರಳದ ಮಲಪ್ಪುರಂ ಜಿಲ್ಲೆಯ ಈ ಕಿರಾತಕ ಯುವಕರನ್ನು ಆದಿಲ್. ಅಯೂಬ್ ಸಾದಿಕ್. ಉಮರ್ ಎಂದು ಗುರುತಿಸಲಾಗಿದೆ. ಇವರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!