ಕುಂಭಮೇಳ: ಕರ್ನಾಟಕದಿಂದ ವಿಶೇಷ ರೈಲುಗಳ ಸಂಚಾರ ಸೇವೆ, ವಿವರ ಇಲ್ಲಿದೆ

WhatsApp Group Join Now
Telegram Group Join Now
Instagram Account Follow Now

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ವಿಶೇಷ ರೈಲುಗಳನ್ನು ಬಿಡಲಾಗಿದೆ. ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲು ನಿಲ್ದಾಣ ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ..

ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು (07379/07380) ಸಂಚಾರ ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 20 ರಂದು (ಸೋಮವಾರ) 00:45 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು, ಜನವರಿ 22 ರಂದು (ಬುಧವಾರ) 02:30 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಕ್ಕೆ ತಲುಪಲಿದೆ.

ರೈಲು ಸಂಖ್ಯೆ 07380 ತುಂಡ್ಲಾ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 23 ರಂದು (ಗುರುವಾರ) 16:00 ಗಂಟೆಗೆ ತುಂಡ್ಲಾದಿಂದ ಹೊರಟು, ಜನವರಿ 25 ರಂದು (ಶನಿವಾರ) 18:40 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು (07381/07382) ಸಂಚಾರ ರೈಲು ಸಂಖ್ಯೆ 07381 ಎಸ್‌ಎಸ್‌ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 6 ರಂದು (ಗುರುವಾರ) 20:10 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು, ಫೆಬ್ರುವರಿ 8 ರಂದು (ಶನಿವಾರ) 20:15 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಕ್ಕೆ ತಲುಪಲಿದೆ.

ರೈಲು ಸಂಖ್ಯೆ 07382 ತುಂಡ್ಲಾ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 9 ರಂದು (ಭಾನುವಾರ) 16:20 ಗಂಟೆಗೆ ತುಂಡ್ಲಾದಿಂದ ಹೊರಟು, ಫೆಬ್ರುವರಿ 11 ರಂದು (ಮಂಗಳವಾರ) 18:40 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ಎರಡೂ ರೈಲುಗಳು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ಪಿಪಾರಿಯಾ, ನರಸಿಂಗಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್‌ಪುರ್, ಪ್ರಯಾಗ್‌ರಾಜ್ ಜಂಕ್ಷನ್, ಫತೇಪುರ್, ಗೋವಿಂದಪುರಿ ಮತ್ತು ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಬೋಗಿಗಳ ಸಂಯೋಜನೆ: ಈ ರೈಲುಗಳು 1 ಎಸಿ ಟು ಟೈರ್, 4 ಎಸಿ ತ್ರಿ ಟೈರ್, 11 ಸ್ಲೀಪರ್ ಕ್ಲಾಸ್, 1 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಬ್ರೇಕ್ ವ್ಯಾನ್ ಮತ್ತು 1 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್ ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿರುತ್ತದೆ.

ಇನ್ನು ಈ ರೈಲುಗಳು ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯ ಸೇರಿದಂತೆ ವಿವಿಧ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ www.enquiry.indianrail.gov.in ಗೆ ಭೇಟಿ ನೀಡಬಹುದಾಗಿದೆ. ಇಲ್ಲವೇ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

WhatsApp Group Join Now
Telegram Group Join Now
Instagram Account Follow Now

Vivek Kudarimath, Chief Editor Vivekvarthe, Journalist, Video Editor, Content Writer, CEO Of VPG Digital Private Limited

Leave a Comment