ವಿವೇಕವಾರ್ತೆ;- ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಅಗಿರುವ ಅನ್ಯಾಯವನ್ನು ಖಂಡಿಸಿ ಫ್ರೀಡಂ ಪಾರ್ಕ್ನಲ್ಲಿ ಜಲ ಸಂರಕ್ಷಣ ಸಮಿತಿಯ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ.
ಭಾನುವಾರ “ನಿರಂತರವಾಗಿ ರೈತರನ್ನು ಸರ್ಕಾರ ಆತ್ಮಹತ್ಯೆಗೆ ತಳ್ಳುತ್ತಿದೆ” ಎಂಬ ಅಣಕು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಕಾವೇರಿ ನೀರು ನಿರ್ವಹಣ ಮಂಡಳಿಯು, ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಭೀತಿಯಲ್ಲಿ ಇರುವುದನ್ನು ಅರ್ಥ ಮಾಡಿಕೊಳ್ಳದೆ. ನಿರಂತರ 3000 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಆದೇಶದಿಂದ ಕರ್ನಾಟಕದ ಜನರಿಗೆ ಕುಡಿಯುವ ನೀರಿಗೂ ಸಂಕಷ್ಟ ಉಂಟಾಗುತ್ತಿದೆ. ರೈತರ ಬದುಕು ಬೀದಿಪಾಲಾಗುತ್ತಿದೆ, ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ವಲಸೆ ಹೋಗುತ್ತಿದ್ದಾರೆ ಎಂದು ರೈತರ ಸಂಕಷ್ಟವನ್ನು ಬಿಚ್ಚಿಟ್ಟರು.
ಈ ಬಗ್ಗೆ ಸಂಬಂಧಪಟ್ಟವರಿಗೆ ರಾಜ್ಯದ ಸಂಕಷ್ಟ ಮನವರಿಕೆ ಮಾಡಿಕೊಡಲು ಕರ್ನಾಟಕ ಜಲ ಸಂರಕ್ಷಣ ಸಮಿತಿ ನಿಯೋಗ ದೆಹಲಿಗೆ ತೆರಳುತ್ತಿದೆ. ಅಕ್ಟೋಬರ್ 9 ಮತ್ತು 10 ರಂದು ಸಂಬಂಧಪಟ್ಟವರನ್ನು ಭೇಟಿ ಮಾಡಿ ಆದೇಶ ರದ್ದುಪಡಿಸಲು ಒತ್ತಾಯಿಸಲಾಗುವುದು. ರಾಷ್ಟ್ರಪತಿಗಳ ಭೇಟಿಗೂ ಸಮಯ ಕೇಳಲಾಗಿದೆ. ಅನುಮತಿ ದೊರೆತರೆ ಅವರಿಗೂ ವಸ್ತು ಸ್ಥಿತಿಯನ್ನು ವಿವರಿಸಲಾಗುತ್ತದೆ ಎಂದು ಕುರುಬೂರು ತಿಳಿಸಿದರು.