ಬೆಳಗಾವಿಯಲ್ಲಿ ಎಣ್ಣೆ ಪಾರ್ಟಿ ವಿಡಿಯೋ ವೈರಲ್​ : ಡಿಎಚ್​ಒ ಕಚೇರಿ ಸಿಬ್ಬಂದಿಯಿಂದ ಪಾರ್ಟಿ ಆಯೋಜನೆ ಆರೋಪ

Published on

spot_img
spot_img

ವಿವೇಕವಾರ್ತೆ : ಬೆಳಗಾವಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್‌ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ.

ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ.

ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿನ ಗಾಂಧಿಜೀ ಫೋಟೋ ಎದುರಿಗೆಯೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವಿಡಿಯೋದಲ್ಲಿ ಸಿಬ್ಬಂದಿ ಸಾರಾಯಿ ಕುಡಿಯುತ್ತಿರುವುದು, ಸಿಗರೇಟು ಸೇದುತ್ತಿರುವುದು, ಡ್ಯಾನ್ಸ್ ಹಾಗೂ ಹರಟೆ ಹೊಡೆಯುತ್ತಿರುವುದನ್ನು ಕಾಣಬಹುದು. ಎಣ್ಣೆ ಪಾರ್ಟಿಯಲ್ಲಿ 6 ಜನ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಬಗ್ಗೆ ಡಿಹೆಚ್​​ಒ ಪ್ರತಿಕ್ರಿಯೆ ಹೀಗಿದೆ: ಈ ಕುರಿತು ಪ್ರತಿಕ್ರಿಯಿಸಿರುವ ಡಿಹೆಚ್​ಓ ಡಾ. ಮಹೇಶ ಕೋಣಿ, ”ವಿಡಿಯೋದಲ್ಲಿ ನೋಡಿದಾಗ ಮೇಲ್ನೋಟಕ್ಕೆ ನಮ್ಮ ಸಿಬ್ಬಂದಿಗಳೇ ಪಾರ್ಟಿ ಮಾಡಿರುವುದು ಕಂಡುಬಂದಿದೆ. ಇದಕ್ಕೂ ಮುಂಚೆ ಈ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಕೂಲಂಕುಷವಾಗಿ ತನಿಖೆ ಮಾಡಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿಗಳು ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡುವುದು ಸರ್ಕಾರಿ ಕರ್ತವ್ಯಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡಿರುವುದು ತಪ್ಪು. ಈ ವಿಡಿಯೋವನ್ನು ಪರಿಶೀಲನೆ ಮಾಡಿ ತಪ್ಪು ಕಂಡು ಬಂದಲ್ಲಿ ನಮ್ಮ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ” ಎಂದು ಹೇಳಿದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!