spot_img
spot_img
spot_img
spot_img
spot_img
spot_img

Mahesh Tenginakai: ಕಾಂಗ್ರೆಸ್ ಬಂದ್ಮೇಲೆ ಭಯೋತ್ಪಾದಕ ಶಕ್ತಿಗಳನ್ನು ಜೈಲಿನಿಂದ ಹೊರಗಡೆ ಬಿಟ್ಟಂತಾಗಿದೆ: ಮಹೇಶ ಟೆಂಗಿನಕಾಯಿ

Published on

spot_img

ವಿವೇಕವಾರ್ತೆ : ವಿಚ್ಛಿದ್ರಕಾರಿ ಶಕ್ತಿಗಳಿಗೆ ಬಿಜೆಪಿ ಸರಕಾರದಲ್ಲಿ ಬಿಗಿ ಬಂದೋಬಸ್ತ್ ಮಾಡಿ ಹತ್ತಿಕ್ಕಿಡುವ ಕೆಲಸವಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರ ಬಂದ ಮೇಲೆ ಭಯೋತ್ಪಾದಕ ಶಕ್ತಿಗಳನ್ನು ಜೈಲಿನಿಂದ ಹೊರಗಡೆ ಬಿಟ್ಟಂತಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶಿವಮೊಗ್ಗ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,

ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಾವು ಬ್ಯಾನ್ ಮಾಡಿದ್ದ ಸಂಘಟನೆಗಳು ಇಂದು ಬೇರೆ ಬೇರೆ ಮುಖವಾಡ ಹಾಕಿಕೊಂಡು ದಾಂಧಲೆ ನಡೆಸುತ್ತಿವೆ. ಹೀಗಾಗಿ ಇಂಥ ಸಮಾಜಘಾತುಕ ಶಕ್ತಿಗಳ ವಿರುದ್ಧ ಇಂದಿನ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೊಳ್ಳ ಬೇಕು. ಭಯೋತ್ಪಾದನಾ ಸಂಘಟನೆಗಳಿಗೆ ಈಗ ಯಾವುದೇ ಲಗಾಮು ಇಲ್ಲ. ಸರ್ಕಾರ ಸಹ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಇಷ್ಟು ದೊಡ್ಡ ಗಲಾಟೆ ಆಗಿದ್ದರೂ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಈ ವಿಚಾರದಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್‌ ಸರಕಾರ ಬಂದಾಗ ಓಲ್ಡ್‌ ವೈನ್‌ ಇನ್‌ ನ್ಯೂ ಬಾಟಲ್‌ ಎನ್ನುವಂತೆ ನಿಷೇಧಿತ ಸಂಘಟನೆಗಳು ಮುಖವಾಡ ಧರಿಸಿಕೊಂಡು ಈ ರೀತಿಯ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಸರಕಾರ ಕಡಿವಾಣ ಹಾಕಬೇಕು. ಇಲ್ಲದೇ ಹೋದಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಇಂತಹ ಅಹಿತಕರ ಘಟನೆ ನಡೆಸುವ ಕಾರ್ಯಕ್ಕೆ ಇವರು ಮುಂದಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!