spot_img
spot_img
spot_img
spot_img
spot_img
spot_img

ಮದ್ಯ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಆರ್​​.ಬಿ.ತಿಮ್ಮಾಪುರ

Published on

spot_img

ವಿವೇಕವಾರ್ತೆ -ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ(Liquor Price) ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ(RB Thimmapur) ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

ಮಧ್ಯದ ಮೇಲೆ ದರ ಏರಿಕೆ – ಸ್ಪಷ್ಟನೆ ನೀಡಿದ ಸಚಿವರು

ಈ ಹಿಂದೆ 17% ರಷ್ಟು ಎಲ್ಲಾ ಮಾದರಿಯ ಮಧ್ಯದ ಮೇಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯಾದ್ಯಂತ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ ಎನ್ನಲಾಗಿತ್ತು. ಇದಕ್ಕೆ ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.

ಇನ್ನು ಇದೇ ವೇಳೆ ಜನವರಿ 22ರಂದು ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರ ‘ರಾಮನ ಗುಡಿ ಕಟ್ಟಿದರೆ ಸಾಲದು, ರಾಮ ರಾಜ್ಯ ಆಗಬೇಕು. ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು, ಧರ್ಮ, ದೇವರು ವಿಚಾರದಲ್ಲಿ ನಮಗೆ ನಂಬಿಕೆ ಇರಬೇಕು. ಆದರೆ, ನನ್ನದೇ ಧರ್ಮ, ನಾನೇ ಸ್ಥಾಪನೆ ಮಾಡುತ್ತೇನೆ ಎನ್ನುವುದು ನಾನೇ ದೇವಸ್ಥಾನ ಕಟ್ಟುಬಿಡುತ್ತೇನೆ ಎನ್ನುವುದು ಸರಿಯಲ್ಲ, ಇಂತಹ ವಿಚಾರಗಳಿಂದ ದೇಶ ದಿವಾಳಿಯಾಗಲಿದೆ ಎಂದಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!