spot_img
spot_img
spot_img
spot_img
spot_img
spot_img

ಇಬ್ಬರು ಮಕ್ಕಳೊಡನೆ ತಾಯಿ ಆತ್ಮಹತ್ಯೆ

Published on

spot_img

ವಿವೇಕವಾರ್ತೆ : ಮನೆ ಕಿಟಕಿ, ಬಾಗಿಲು ಮುಚ್ಚಿಟ್ಟು ಗಾಳಿಯಾಡದಂತೆ ಮಾಡಿ ವಿಷಾನಿಲ ತುಂಬಿಸಿ ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ದಾಸರಕೊಪ್ಪಲಿನಲ್ಲಿ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ತೀರ್ಥ ಎಂಬವರ ಪತ್ನಿ ಶಿವಮ್ಮ (೩೬), ಮಕ್ಕಳಾದ ಸಿಂಚು (೭) ಪವನ (೧೦) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಛಾವಣಿಗೆ ಹೋಗಿ ಮಲಗಿದ್ದರು.

ಬೆಳಗ್ಗೆ ಕೆಳಗೆ ಬಂದು ಪುನಃ ಬಾಗಿಲು ಪಡೆದು, ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡ ಆತ ಮನೆ ಮಾಲೀಕರ ಸಹಾಯದಿಂದ ಇನ್ನೊಂದು ಕೀ ಪಡೆದು ಬಾಗಿಲು ತೆರೆದು ಒಳಗೆ ಹೋದರು.

ಮನೆಯ ಒಳಗೆ ಎಲ್‌ಪಿಜಿ ವಾಸನೆ ಗಾಢವಾಗಿ ತುಂಬಿತ್ತು. ಹೀಗಾಗಿ ಮೊದಲು ಕಿಟಕಿ, ಬಾಗಿಲು ತೆರೆದಿಟ್ಟು ಕೆಲ ನಿಮಿಷಗಳ ನಂತರ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಪ್ರಾಣ ಕಳೆದುಕೊಂಡ ದಾರುಣ ದೃಶ್ಯ ಕಣ್ಣಿಗೆ ಬಿತ್ತು. ಸಾವಿಗೆ ಇನ್ನಷ್ಟು ಕಾರಣ ತಿಳಿಯಬೇಕಿದೆ. ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿಮಾಡಿ ಪರಿಶೀಲನೆ ನಡೆಸಿದರು. ವಿಷಾನಿಲ ತುಂಬಿಸಿ ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ದಾಸರಕೊಪ್ಪಲಿನಲ್ಲಿ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ತೀರ್ಥ ಎಂಬವರ ಪತ್ನಿ ಶಿವಮ್ಮ (೩೬), ಮಕ್ಕಳಾದ ಸಿಂಚು (೭) ಪವನ (೧೦) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಛಾವಣಿಗೆ ಹೋಗಿ ಮಲಗಿದ್ದರು.

ಬೆಳಗ್ಗೆ ಕೆಳಗೆ ಬಂದು ಪುನಃ ಬಾಗಿಲು ಪಡೆದು, ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡ ಆತ ಮನೆ ಮಾಲೀಕರ ಸಹಾಯದಿಂದ ಇನ್ನೊಂದು ಕೀ ಪಡೆದು ಬಾಗಿಲು ತೆರೆದು ಒಳಗೆ ಹೋದರು.

ಮನೆಯ ಒಳಗೆ ಎಲ್‌ಪಿಜಿ ವಾಸನೆ ಗಾಢವಾಗಿ ತುಂಬಿತ್ತು. ಹೀಗಾಗಿ ಮೊದಲು ಕಿಟಕಿ, ಬಾಗಿಲು ತೆರೆದಿಟ್ಟು ಕೆಲ ನಿಮಿಷಗಳ ನಂತರ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಪ್ರಾಣ ಕಳೆದುಕೊಂಡ ದಾರುಣ ದೃಶ್ಯ ಕಣ್ಣಿಗೆ ಬಿತ್ತು. ಸಾವಿಗೆ ಇನ್ನಷ್ಟು ಕಾರಣ ತಿಳಿಯಬೇಕಿದೆ. ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!