spot_img
spot_img
spot_img
spot_img
spot_img

ಅಳಿಯ-ಮಗಳ ಜಗಳದಲ್ಲಿ ಹತ್ಯೆಯಾದ ಅತ್ತೆ

Published on

spot_img

ವಿವೇಕವಾರ್ತೆ: ಅಳಿಯ-ಮಗಳ ಜಗಳದಲ್ಲಿ ಅತ್ತೆ ಹತ್ಯೆಯಾದ ಘಟನೆ ಮಧುಗಿರಿಯ (Madhugiri) ಕೊಡಿಗೇನಹಳ್ಳಿಯಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ಅಶ್ವಿತ್ ಉನ್ನಿಸಾ (58) ಎಂದು ಗುರುತಿಸಲಾಗಿದೆ. ಹತ್ಯೆಯಾದ ಮಹಿಳೆಯ ಮಗಳು ಹಾಗೂ ಅಳಿಯನ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಯತ್ನಿಸಿದ ಮಹಿಳೆಯ ತಲೆಗೆ ಅಳಿಯ ದೊಣ್ಣೆಯಿಂದ ಹೊಡೆದ ಪರಿಣಾಮ ಆಕೆ ಸಾವಿಗೀಡಾಗಿದ್ದಾಳೆ.

ಹತ್ಯೆಯಾದ ಅಶ್ವಿತ್ ಉನ್ನಿಸಾಳ ಮಗಳನ್ನು ಕೊಡಿಗೇನಹಳ್ಳಿಯ ಸೈಯದ್ ಸುಹೇಲ್‍ನೊಂದಿಗೆ ಮದುವೆ ಮಾಡಲಾಗಿತ್ತು. ಮದುವೆಯ ಬಳಿಕ ಅವರಿಬ್ಬರ ನಡುವೆ ನಿರಂತರ ಜಗಳ ನಡೆಯುತ್ತಿತ್ತು. ಎಂದಿನಂತೆ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ತವರು ಮನೆಯಲ್ಲಿದ್ದ ತಾಯಿಯನ್ನು ಫೋನ್ ಮಾಡಿ ಮಗಳು ಕರೆಸಿಕೊಂಡಿದ್ದಳು. ಈ ವೇಳೆ ಜಗಳ ಬಿಡಿಸಲು ಮುಂದಾದ ಮಹಿಳೆಯ ತಲೆಗೆ ಅಳಿಯ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಶ್ವಿತ್ ಉನ್ನಿಸಾಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.


ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!