Wednesday, September 27, 2023

ಒಂದು ಕೊಲೆಯಾಗಿದ್ದ ಮನೆಯ ಸಂಪ್​ನಲ್ಲಿ ಮತ್ತೊಂದು ಶವ ಪತ್ತೆ; ಯಾರ ಮೇಲೆ ಅನುಮಾನವಿತ್ತೋ ಅವನೇ ಕೊಲೆಯಾಗಿದ್ದ!

ರಾಜಧಾನಿಯ ಮನೆಯೊಂದರಲ್ಲಿ ನಿನ್ನೆ ನಡೆದಿದ್ದ ಕೊಲೆ ಪ್ರಕರಣದ ಬೆನ್ನಿಗೇ ಇಂದು ಮತ್ತೊಂದು ಶವ ಪತ್ತೆಯಾಗಿದೆ. ಅಷ್ಟಕ್ಕೂ ಯಾರ ಮೇಲೆ ಅನುಮಾನವಿತ್ತೋ ಆತನೇ ಶವವಾಗಿ ಮನೆಯ ಸಂಪ್​ನಲ್ಲಿ ಸಿಕ್ಕಿರುವುದರಿಂದ ಪ್ರಕರಣಕ್ಕೆ ತಿರುವು ಸಿಕ್ಕಂತಾಗಿದೆ.

ಕೋರಮಂಗಲ ಆರನೇ ಬ್ಲಾಕ್​ನಲ್ಲಿ ಬಿಲ್ಡರ್ ರಾಜಗೋಪಾಲರೆಡ್ಡಿ ಎಂಬವರಿಗೆ ಸೇರಿದ ಮನೆಯಲ್ಲಿ ನಿನ್ನೆ ಈ ಕೊಲೆ ನಡೆದಿದ್ದು, ಕಳ್ಳತನ ಕೂಡ ನಡೆದಿತ್ತು. ಮನೆಯಲ್ಲಿ ಕೆಲಸಕ್ಕಿದ್ದ, ದಾವಣಗೆರೆ ಮೂಲದ ಕರಿಯಪ್ಪ ಎಂಬಾತನ ಕೊಲೆಯಾಗಿತ್ತು. ಸಂಬಂಧಿಕರ ಮದುವೆ ಸಮಾರಂಭವೊಂದಕ್ಕೆ ಮನೆಯರೆಲ್ಲ ನಿನ್ನೆ ಅನಂತಪುರಕ್ಕೆ ಹೋಗಿದ್ದಾಗ ಈ ಪ್ರಕರಣ ನಡೆದಿತ್ತು. ದುಷ್ಕರ್ಮಿಗಳು ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಹಾಗೂ 5 ಲಕ್ಷ ನಗದು ದೋಚಿಕೊಂಡು ಹೋಗಿದ್ದರು. ಮಾತ್ರವಲ್ಲ ಸಿಸಿಟಿವಿಯ ಡಿವಿಆರ್​ ಕೂಡ ಕಾಣೆಯಾಗಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮನೆಯಲ್ಲಿ ಕೆಲಸಗಾರ ಕರಿಯಪ್ಪನ ಜತೆಗೆ ಅಸ್ಸಾಂ ಮೂಲದ ದಿಲ್ ಬಹದ್ದೂರ್ ಎಂಬಾತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕರಿಯಪ್ಪ ಮೂವತ್ತು ವರ್ಷಗಳಿಂದ ರಾಜಗೋಪಾಲರೆಡ್ಡಿ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದು, ದಿಲ್ ಬಹದ್ದೂರ್ ಕಳೆದ ಎರಡು ವರ್ಷಗಳಿಂದ ಕೆಲಸಕ್ಕಿದ್ದ. ಬಹದ್ದೂರೇ ಕರಿಯಪ್ಪನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಆರಂಭದಲ್ಲಿ ಅನುಮಾನ ಉಂಟಾಗಿತ್ತು.

ಆದರೆ ಪೊಲೀಸರು ಮಹಜರು ನಡೆಸುವ ವೇಳೆ ಮನೆಯ ಸಂಪ್​ನಲ್ಲಿ ಇನ್ನೊಂದು ಶವ ಪತ್ತೆಯಾಗಿದೆ. ವಿಚಿತ್ರವೆಂದರೆ ದಿಲ್ ಬಹದ್ದೂರ್ ಕೂಡ ಕೊಲೆಯಾಗಿದ್ದು, ಆತನ ಶವ ಸಂಪ್​ನಲ್ಲಿ ಕಂಡುಬಂದಿತ್ತು.
ಬೆಳಗ್ಗೆ ಕೋರಮಂಗಲ ಪೊಲೀಸರಿಂದ ಕರಿಯಪ್ಪ ಕೊಲೆಯಾಗಿರುವ ಕುರಿತು ಮಾಹಿತಿ ಬಂದಿತ್ತು. ಹೀಗಾಗಿ ಪ್ರಕರಣ ಇದೀಗ ಕ್ಲಿಷ್ಟ ಎಂಬಂತಾಗಿದ್ದು, ಕೊಲೆಗಾರರು ಯಾರು, ಇವರಿಬ್ಬರನ್ನು ಬಿಟ್ಟು ಇನ್ಯಾರು ಮನೆಗೆ ಬಂದಿದ್ದರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!