spot_img
spot_img
spot_img
spot_img
spot_img

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಬ್ಬರ ನಿಗೂಢ ಸಾವು: ಬಯಲಾಯ್ತು ಹಾಸ್ಟೆಲ್​ ವಾರ್ಡನ್ ಅಕ್ರಮ​ ರಹಸ್ಯ

Published on

spot_img

ವಿವೇಕವಾರ್ತೆ :  ಬಾಲಕಿಯರ ಹಾಸ್ಟೆಲ್‌ನಲ್ಲಿ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಸಂಚಲನ ಉಂಟುಮಾಡಿದೆ.ಮೃತರನ್ನು ಭವ್ಯ ಮತ್ತು ವೈಷ್ಣವಿ ಎಂದು ಗುರುತಿಸಲಾಗಿದೆ.

ಇಬ್ಬರು ವಿದ್ಯಾರ್ಥಿನಿಯರು ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಹಬ್ಸಿಗುಡಾ ಮೂಲದ ಇಬ್ಬರು ಬಾಲಕಿಯರು ಹಾಸ್ಟೆಲ್‌ನಲ್ಲಿದ್ದುಕೊಂಡು ಭುವನಗಿರಿಯ ರೆಡ್ಡಿವಾಡ ಬಾಲಕಿಯರ ಪ್ರೌಢಶಾಲೆಯಲ್ಲಿ ಓದುತ್ತಿದ್ದರು. ಎಂದಿನಂತೆ ಶನಿವಾರವೂ ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ಸಂಜೆ ಹಾಸ್ಟೆಲ್‌ಗೆ ಮರಳಿದರು.

ಊಟದ ಸಮಯದಲ್ಲೂ ಇಬ್ಬರೂ ಕೊಠಡಿಯಿಂದ ಹೊರಗೆ ಬರದ ಕಾರಣ ವಿದ್ಯಾರ್ಥಿನಿಯೊಬ್ಬಳು ಅನುಮಾನಗೊಂಡು ಕೊಠಡಿಗೆ ತೆರಳಿ ನೋಡಿದಾಗ ಆಘಾತಕಾರಿ ದೃಶ್ಯ ಕಂಡಿರು. ಇಬ್ಬರು ವಿದ್ಯಾರ್ಥಿನಿಯರು ಎರಡು ಫ್ಯಾನ್‌ಗೆ ನೇಣು ಹಾಕಿಕೊಂಡು ನೇತಾಡುತ್ತಿದ್ದರು. ಕೂಡಲೇ 108 ಆಂಬ್ಯುಲೆನ್ಸ್‌ಗೆ ಕರೆ ಮಾಡಿ, ಆಸ್ಪತ್ರೆಗೆ ಸಾಗಿಸಲಾದರೂ ಪರೀಕ್ಷಿಸಿದ ವೈದ್ಯರು ಅದಾಗಲೇ ಇಬ್ಬರು ಮೃತಪಟ್ಟಿರುವುದಾಗಿ ಘೋಷಿಸಿದರು.

ಬಾಲಕಿಯರು ನೇಣು ಬಿಗಿದುಕೊಂಡ ಕೊಠಡಿಯಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಉಲ್ಲೇಖಿಸಿರುವ ಅಂಶಗಳು ಆಘಾತಕಾರಿಯಾಗಿದೆ. ಇನ್ನೊಂದೆಡೆ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣದಲ್ಲಿ ಸಂಚಲನದ ಸಂಗತಿಗಳು ಸಹ ಬೆಳಕಿಗೆ ಬರುತ್ತಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿಯರ ಹಿಂಭಾಗದಲ್ಲಿ ಗಾಯಗಳು ಕಂಡುಬಂದಿವೆ. ಕೈ ಮತ್ತು ಕೆನ್ನೆಯ ಮೇಲೆ ಕಚ್ಚಿದ ಗಾಯಗಳು ಕಂಡುಬಂದಿವೆ. ಈ ಸಂಬಂಧ ಕುಟುಂಬದ ಸದಸ್ಯರು ಫೋಟೋಗಳನ್ನು ಬಿಡುಗಡೆ ಮಾಡಿ, ತಮ್ಮ ಮಕ್ಕಳನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.

ಹಾಸ್ಟೆಲ್ ವಾರ್ಡನ್, ಆಟೋ ಚಾಲಕನೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವುದು ಭವ್ಯ ಮತ್ತು ವೈಷ್ಣವಿ ಅವರಿಗೆ ತಿಳಿದು, ವಾರ್ಡನ್ ಕಿರುಕುಳ ನೀಡುತ್ತಿದ್ದರು. ಕೊಠಡಿಯಲ್ಲಿ ಸಿಕ್ಕಿರುವ ಆತ್ಮಹತ್ಯೆ ಪತ್ರವೂ ಕೂಡ ಅಸಲಿ ಅಲ್ಲ. ಕೊಲೆ ಮಾಡಿದ ಬಳಿಕ ಪ್ರಕರಣ ಹೊರಗೆ ಬಾರದಂತೆ ವಾರ್ಡನ್ ಮೇಡಂ ಅವರನ್ನು ಹೊಗಳಿ ಪತ್ರ ಬರೆಸಿದ್ದಾರೆ ಎಂದು ಮೃತರ ಪಾಲಕರು ಆರೋಪ ಮಾಡಿದ್ದಾರೆ.

ವಾರ್ಡನ್‌ನ ಅಕ್ರಮ ರಹಸ್ಯ ಬಹಿರಂಗಗೊಂಡಿದ್ದು ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಬಾಲಕಿಯರ ಸಂಬಂಧಿಕರು ಆರೋಪಿಸಿದ್ದಾರೆ. ಸಂಬಂಧಿಕರ ಅನುಮಾನದ ಜೊತೆಗೆ ಪ್ರಕರಣದ ತನಿಖೆಯ ಭಾಗವಾಗಿ ಹಾಸ್ಟೆಲ್ ವಾರ್ಡನ್, ಆಟೋ ಚಾಲಕ ಆಂಜನೇಯು, ಅಡುಗೆಯವರಾದ ಸುಜಾತ, ಸುಲೋಚನಾ, ಪಿಇಟಿ ಪ್ರತಿಭಾ ಹಾಗೂ ಟ್ಯೂಷನ್ ಶಿಕ್ಷಕಿ ಭುವನೇಶ್ವರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ಬಳಿಕ ವಿದ್ಯಾರ್ಥಿಗಳ ಸಾವಿನ ಹಿಂದಿನ ಅಸಲಿ ಕಾರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

Related Content

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...

IPL 2024:  ಕ್ರಿಕೆಟ್‌ ಅಭಿಮಾನಿಗಳು ಕುತೂಹಲದಿಂದ ಕಾದಿದ್ದIPL ಆರಂಭದ ದಿನಾಂಕ ಫಿಕ್ಸ್!

ಮುಂಬೈ: ಕ್ರಿಕೆಟ್‌ ಅಭಿಮಾನಿಗಳು ಕುತೂಹಲದಿಂದ ಕಾದಿದ್ದ, ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2024) ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಕುರಿತು...
error: Content is protected !!