spot_img
spot_img
spot_img
spot_img
spot_img
spot_img

ಬಸ್‌ ಪ್ರಯಾಣದ ಖುಷಿ ಹೆಚ್ಚಿಸಿತು ಹೊಸ ಸೌಲಭ್ಯ!

Published on

spot_img

ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಬಸ್‌ (NWKRTC) ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಯುಪಿಐ ವಹಿವಾಟಿಗೆ (UPI In Bus) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆಯಿಂದ ಖುಷಿಯಾಗಿರುವ ನಿಗಮದ ಎಂ.ಡಿ. ಭರತ್, ತಮ್ಮ ನಿಗಮದ ವ್ಯಾಪ್ತಿಯ ಎಲ್ಲ ಬಸ್‌ಗಳಿಗೂ ವಿಸ್ತರಿಸಲು ಮುಂದಾಗಿದ್ದಾರೆ.

ತಿಂಗಳಲ್ಲಿ 1.50 ಕೋಟಿಗೂ ಹೆಚ್ಚು ಯುಪಿಐ ವಹಿವಾಟು ನಡೆದಿದ್ದು, ಜನವರಿ ತಿಂಗಳಾಂತ್ಯಕ್ಕೆ ಬೇರೆ ವಿಭಾಗಗಳಿಗೂ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಪೈಕಿ ವಾಯುವ್ಯ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಯುಪಿಐ ವಹಿವಾಟು ಪ್ರಯೋಗ ಮಾಡಲಾಗಿತ್ತು. ನಾಪತ್ತೆಯಾಗಿದ್ದ ಮಹಿಳೆ Death – ಶಿಕ್ಷಕಿ ಸಾವಿನ ಸುತ್ತ ಅನುಮಾನದ ಹುತ್ತ!

NWKRTC UPI PAYMENT ಬಸ್‌

ನಿರ್ವಾಹಕರಿಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂಆರ್ ಕೋಡ್

ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಯುಪಿಐ ಸೌಲಭ್ಯವನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಪ್ರತಿಯೊಬ್ಬ ನಿರ್ವಾಹಕರಿಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂಆರ್ ಕೋಡ್ ನೀಡಲಾಗಿತ್ತು.

452 ಬಸ್‌ಗಳಲ್ಲಿ ಯುಪಿಐ

ಫೋನ್ ಪೇ, ಗೂಗಲ್ ಪೇ ಮತ್ತಿತರ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಗೆ ಅವಕಾಶ ಕಲ್ಪಿಸಲಾಗಿತ್ತು. ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ 452 ಬಸ್ಸುಗಳಿಗೆ ಯುಪಿಐ ವ್ಯವಸ್ಥೆ ಮಾಡಲಾಗಿತ್ತು. ಜನವರಿ 10ರವರೆಗೆ 71,396 ಪ್ರಯಾಣಿಕರಿಂದ ವಹಿವಾಟು ನಡೆದಿದ್ದು, ಯುಪಿಐ ಮೂಲಕ 1,50,26,815 ಮೊತ್ತದ ಹಣ ಪಾವತಿಯಾಗಿದೆ.

ಹೆಚ್ಚಿದ ಬೇಡಿಕೆ

ಯುಪಿಐಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗದು ರಹಿತ ಪ್ರಯಾಣ ಹಾಗೂ ಸಮಯ ಉಳಿತಾಯವಾಗುತ್ತೆ ಎಂಬ ಮಾತು ಕೇಳಿಬಂದಿದೆ. ಜೊತೆಗೆ ಇದ್ರಿಂದ ಚಿಲ್ಲರೆ ಸಮಸ್ಯೆಗೆ ಮುಕ್ತಿ ಸಿಕ್ಕಿದೆ ಅಂತ ಸಿಬ್ಬಂದಿ ಹೇಳ್ತಿದಾರೆ. ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಬೇಡಿಕೆಯಂತೆ ಯುಪಿಐ ಪಾವತಿ  ವ್ಯವಸ್ಥೆ ವಿಸ್ತರಣೆಗೆ ತೀರ್ಮಾನಿಸಲಾಗಿದೆ.

ವಾಯುವ್ಯ ನಿಗಮದ ಇತರೆ ಬಸ್ಸುಗಳಿಗೂ ವಿಸ್ತರಿಸಲು ನಿರ್ಧಾರ ಮಾಡಲಾಗಿದೆ. ಜನವರಿ ತಿಂಗಳ ಅಂತ್ಯದೊಳಗೆ ಸಂಸ್ಥೆಯ ಎಲ್ಲಾ 4581 ಬಸ್‌ಗಳಲ್ಲಿ ಯುಪಿಐ ವ್ಯವಸ್ಥೆ ಜಾರಿಗೆ ತರೋದಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಂ.ಡಿ. ಭರತ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೆಲವೇ ದಿನಗಳಲ್ಲಿ ವಾಯುವ್ಯ ಸಾರಿಗೆ ನಿಗಮದ ಎಲ್ಲ ಬಸ್ ಗಳಲ್ಲಿಯೂ ಯುಪಿಐ ವ್ಯವಸ್ತೆ ಅನುಷ್ಠಾನಕ್ಕೆ ಬರೋದು ಖಚಿತವಾಗಿದೆ.

NWKRTC

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!