ಹಳೇ ನೋಟು ಚಲಾವಣೆಗೆ ಬಂದಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯೋಗನಂದ , ವೆಂಕಟರಮಣ, ಹರಿಪ್ರಸಾದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು, ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬಂದಿದ್ದು.
ಕದಿರೇನಗಳ್ಳಿ ಫ್ಲೈಓವರ್ ಬಳಿ ನಿಷೇಧಿತ ಐದು ನೂರು ರೂಪಾಯಿ ಮುಖಬೆಲೆಯ ಹಳೇ ನೋಟುಗಳ ಚಲಾವಣೆಗೆ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬನಶಂಕರಿ ಠಾಣೆ ಪೊಲೀಸರು, ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದು 500 ಮುಖ ಬೆಲೆಯ 88 ಲಕ್ಷ ಹಳೇ ನೋಟುಗಳನ್ನು ವಶಕ್ಕೆ ಪಡೆದಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.