spot_img
spot_img
spot_img
spot_img
spot_img
spot_img

ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

Published on

spot_img

ವಿವೇಕವಾರ್ತೆ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು (Parents) ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ (Yadrami) ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.

ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ.

ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.


ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!