ಸಂಶೋಧನಾ ವಿದ್ಯಾರ್ಥಿಯಿಂದ ಅತ್ಯಾಚಾರ: ಮನೆ ಕೆಲಸಕ್ಕೆ ಬರುತ್ತಿದ್ದ ಬಾಲಕಿ ಗರ್ಭಿಣಿ

ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯೊಬ್ಬ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ಪ್ರಕರಣ ತುಮಕೂರಿನಲ್ಲಿ ನಡೆದಿದೆ. ತುಮಕೂರು ವಿವಿ ಸಂಶೋಧನಾ ವಿದ್ಯಾರ್ಥಿ 17 ವರ್ಷದ ಬಾಲಕಿಯನ್ನ ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ಮನೆಯಲ್ಲಿ ಬಡತನದ ಕಾರಣ ವಿದ್ಯಾರ್ಥಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದಳು. ಆರೋಪಿ ಮನೆಯಲ್ಲಿ ಯಾರು ಇಲ್ಲದಾಗ ಆಕೆಯನ್ನ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು.ಸಂತ್ರಸ್ತೆ ಗರ್ಭಿಣಿಯಾಗಿದ್ದು, ಪೋಷಕರು ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

error: Content is protected !!