spot_img
spot_img
spot_img
spot_img
spot_img
spot_img

PSI Exam Guidelines: ಜನವರಿ 23ರಂದು ಪಿಎಸ್‌ಐ ಪರೀಕ್ಷೆ: ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ!

Published on

spot_img

ಬೆಂಗಳೂರು: ಇದೇ ಜನವರಿ 23ರಂದು ಪಿಎಸ್‌ಐ ( PSI ) ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ :ಟಿ-20 ಸರಣಿ: ಐತಿಹಾಸಿಕ ಶತಕ ಬಾರಿಸಿ ದಾಖಲೆ ಉಡೀಸ್ ಮಾಡಿದ ರೋಹಿತ್‌ ಶರ್ಮಾ!

ಹಾಲ್‌ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು (Guidelines) ಹೊರಡಿಸಲಾಗಿದೆ.

ಪಿಎಸ್ಐ

ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
* ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ
* ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು
* ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್‌ಗಳಿಗೆ ಅನುಮತಿ ಇಲ್ಲ
* ಶರ್ಟ್ ಅಥವಾ ಪ್ಯಾಂಟ್‌ಗಳಿಗೆ ಜಿಪ್ ಪ್ಯಾಕೆಟ್‌ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು
* ಪರೀಕ್ಷಾ ಹಾಲ್‌ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ
* ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ
* ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸುವುದು ನಿಷೇಧ

ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
* ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ
* ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
* ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು
* ಇನ್ನೊಬ್ಬರಿಗೆ ಮುಜುಗರವಾಗದ ಟಾಪ್‌ಗಳು ಬಳಸಲು ಸೂಚನೆ
* ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ
* ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ
* ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ

ಸರ್ಕಾರಿ ಗುರುತಿನ ಚೀಟಿ

ಪರೀಕ್ಷಾ ಕೊಠಡಿಗೆ ಈ ಪತ್ರಗಳು ಕಡ್ಡಾಯ:
* ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು
* ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿರಬೇಕು

ಎಲ್ಲರೂ ಈ ಸೂಚನೆ ಪಾಲಿಸಬೇಕು:
ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲರೂ ಪಾಲಿಸುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೇ ಎಲ್ಲಾ ಅಭ್ಯರ್ಥಿಗಳಿಗೂ ಈ ಕೆಳಗಿನ ವಸ್ತುಗಳು ಬಳಸದಂತೆ ಸೂಚನೆ ನೀಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್‌ಡ್ರೈವ್‌, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ಪರೀಕ್ಷಾ ಹಾಲ್‌ಗೆ ಕೊಂಡೊಯ್ಯುವಂತಿಲ್ಲ.

ಕಳೆದ ಸಲ ಪಿಎಸ್ಐ ಪರಿಕ್ಷೆಯಲ್ಲಿ ಹಲವಾರು ಜನ ಬ್ಲೂಟೂತ್ ಡಿವೈಸ್ ಬಳಿಸಿ ಪರಿಕ್ಷೆಯಲ್ಲಿ ಪಾಸ್ ಆಗಿದ್ರು ತದ ನಂತರ ಅವರು ಮಾಡಿದ ಅವ್ಯವಹಾರ ಬೆಳಕಿಗೆ ಬಂದು ದೂರು ದಾಖಲಾಗಿ ತಪ್ಪು ಮಾಡಿದ ಎಲ್ಲರನ್ನೂ ಅಂದರ್ ಮಾಡಿದ್ದರು.

ಈ ಸಲ ಆದರು ಪರಿಕ್ಷೆ ಸರಿಯಾಗಿ ನಡೆದು ಅರ್ಹ ಅಭ್ಯರ್ಥಿಗಳು ಆಯ್ಕೆಯಾಗಬೇಕು, ಎಂದು ಜನ ಮಾತನಾಡುತ್ತಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!