spot_img
spot_img
spot_img
spot_img
spot_img
spot_img

PSI ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಸಬ್​ಇನ್ಸ್​ಪೆಕ್ಟರ್ ವಶಕ್ಕೆ ಪಡೆದ CCB

Published on

spot_img

ಬೆಂಗಳೂರು:- ಪಿಎಸ್​ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಬ್​ಇನ್ಸ್​ಪೆಕ್ಟರ್ ಓರ್ವರನ್ನು ಸಿಸಿಬಿ​ ವಶಕ್ಕೆ ಪಡೆದಿದೆ.

ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು, ಇನ್ಸ್​ಪೆಕ್ಟರ್​ ಲಿಂಗಯ್ಯನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂತಕುಮಾರ್ ಪ್ರತಿಕ್ರಿಯಿಸಿದ್ದು, 1 ಲಕ್ಷ 60 ಸಾವಿರ ಅಭ್ಯರ್ಥಿಗಳು ಸಿಟಿಐ ಪರೀಕ್ಷೆ ಬರೆಯಲಿದ್ದಾರೆ. ಲಿಂಗಯ್ಯ ಎಂಬ ಪಿಎಸ್ಐ ಮಾತನಾಡಿದ ಆಡಿಯೋ ಲಭ್ಯವಾಗಿದೆ. ಪ್ರಶ್ನೆ ಪತ್ರಿಕೆ ನಾವೇ ಕೊಡುತ್ತೇವೆ, ಪೋಸ್ಟಿಂಗ್ ಕೊಡಿಸುತ್ತೇವೆ ಎಂದಿದ್ದಾರೆ. ಪಿಎಸ್​​ಐ ಪರೀಕ್ಷೆ ಕೂಡ ಬರೆಸುತ್ತೇವೆ ಅಂತಾ ಮಾತನಾಡಿದ್ದಾರೆ. ಕೆಪಿಎಸ್​​ಸಿ ಬೋರ್ಡ್​ ಮುಂದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಆದರೆ ಪೋಷಕರನ್ನು ಭೇಟಿಮಾಡಲು ಒಳಗಡೆ ಕರೆಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಜ.21ರಂದು ಕಮರ್ಷಿಯಲ್ ಟ್ಯಾಕ್ಸ್ ಇನ್ಸ್​ಪೆಕ್ಟರ್ ಪರೀಕ್ಷೆ ಇದೆ. ಜ.23ರಂದು ನಡೆಯುವ ಪಿಎಸ್​ಐ ಪರೀಕ್ಷೆಗೆ ಸಂಚು ನಡೆಸಿದ್ದಾರೆ. ಎರಡೂ ಪರೀಕ್ಷೆಗಳ ಅಕ್ರಮಕ್ಕೆ ಸಂಚು ರೂಪಿಸಿದ್ದಾರೆ. ಒಂದು ಹುದ್ದೆಗೆ 80 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡುತ್ತಿದ್ದಾರೆ. ಆಡಿಯೋದಲ್ಲಿ ಪವನ್ ಮತ್ತು ರಜತ್ ಎಂಬುವರ ಹೆಸರು ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!