ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

WhatsApp Group Join Now
Telegram Group Join Now
Instagram Account Follow Now

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ.

ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

WhatsApp Group Join Now
Telegram Group Join Now
Instagram Account Follow Now

Vivek Kudarimath, Journalist With a Work Experience of 8 years in media Field, Working with vivekvarthe since 15-08-2015

Leave a Comment