spot_img
spot_img
spot_img
spot_img
spot_img
spot_img

ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್

Published on

spot_img

ಮುಂಬೈ: ಇತ್ತೀಚೆಗೆ ವೈರಲ್ ಆಗಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಡೀಪ್‍ಫೇಕ್ (Deepfake) ವೀಡಿಯೋ ಸಂಬಂಧ ಮುಂಬೈ (Mumbai) ಪೊಲೀಸರು (Police) ಗೇಮಿಂಗ್ ಅಪ್ಲಿಕೇಶನ್ ಹಾಗೂ ಫೇಸ್‍ಬುಕ್ ಪುಟವೊಂದರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಮತ್ತು ಅವರ ಮಗಳು ಸಾರಾ ಆನ್‍ಲೈನ್ ಗೇಮ್‍ವೊಂದರ ಮೂಲಕ ದೊಡ್ಡ ಮೊತ್ತದ ಹಣವನ್ನು ಗೆದ್ದಿದ್ದಾರೆ ಎಂದು ವೀಡಿಯೋದಲ್ಲಿ ಹೇಳಲಾಗಿತ್ತು. ಅಲ್ಲದೇ ಸಚಿನ್ ಗೇಮಿಂಗ್ ಅಪ್ಲಿಕೇಷನ್‍ನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರ ಧ್ವನಿ ಹಾಗೂ ಅವರ ವೀಡಿಯೋ ಬಳಸಿ ಹಂಚಿಕೊಳ್ಳಲಾಗಿತ್ತು. ಇದನ್ನು ಸಚಿನ್ ಅವರ ಟ್ವಿಟ್ಟರ್ ಮೂಲಕವೂ ಫ್ಲಾಗ್ ಮಾಡಲಾಗಿತ್ತು.

ಈ ಬಗ್ಗೆ ಸಚಿನ್ ಆಪ್ತ ಸಹಾಯಕರೊಬ್ಬರು ನೀಡಿದ ದೂರಿನ ಅಡಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 500ರ ಅಡಿ (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66ರ (ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವುದು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಗೇಮಿಂಗ್ ಸೈಟ್ ಮತ್ತು ಫೇಸ್‍ಬುಕ್ ಪುಟದ ಮಾಲೀಕರ ಬಗ್ಗೆ ಪೊಲೀಸರು ವಿವರಗಳನ್ನು ಹಂಚಿಕೊಂಡಿಲ್ಲ.


ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ತೆಂಡೂಲ್ಕರ್ ಇದು ನಕಲಿ ವೀಡಿಯೋ ಎಂದು ಸ್ಪಷ್ಟನೆ ನೀಡಿದ್ದರು. ಅಲ್ಲದೇ ತಂತ್ರಜ್ಞಾನಗಳ ದುರುಪಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸೂಕ್ತ ಕ್ರಮಗಳು ಅವಶ್ಯಕವಾಗಿ ಬೇಕು ಎಂದು ಆಗ್ರಹಿಸಿದ್ದರು.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!