spot_img
spot_img
spot_img
spot_img
spot_img
spot_img

ಸಿಲಿಕಾನ್ ಸಿಟಿಯಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು ಕೇಸ್ – 6 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ!

Published on

spot_img

ಬೆಂಗಳೂರು:- ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು ಮಾಡಿದ್ದ 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ಕಳೆದ ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.

ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ

ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು

ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ ಸಿದ್ಧ ಮಾಡಿಕೊಂಡಿದ್ದ ಎನ್ನಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!