ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (Karnataka State Administrative Tribunal) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸ್ಟೆನೋಗ್ರಾಫರ್(Stenographer) ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.
ರಾಜ್ಯ ಸರ್ಕಾರದ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್(Post) ಮೂಲಕ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುಲರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ |
ಹುದ್ದೆ | ಸ್ಟೆನೋಗ್ರಾಫರ್ |
ಒಟ್ಟು ಹುದ್ದೆ | 8 |
ವಿದ್ಯಾರ್ಹತೆ | 10ನೇ ತರಗತಿ ಪಾಸ್ |
ವೇತನ | ಮಾಸಿಕ ₹ 30,350-58,250 |
ಉದ್ಯೋಗದ ಸ್ಥಳ | ಬೆಂಗಳೂರು, ಬೆಳಗಾವಿ, ಕಲಬುರಗಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 31, 2023 |
ಎಷ್ಟೆಷ್ಟು ಹುದ್ದೆಗಳಿವೆ ಎಂಬ ಮಾಹಿತಿ ಇಲ್ಲಿದೆ.
ಸ್ಟೆನೋಗ್ರಾಫರ್ (RPC)- 7
ಸ್ಟೆನೋಗ್ರಾಫರ್ (LC)- 1
ವಿದ್ಯಾರ್ಹತೆ ಏನಿರಬೇಕು?
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಸ್ಟೆನೋಗ್ರಾಫರ್ (RPC)- 18 ರಿಂದ 35 ವರ್ಷ
ಸ್ಟೆನೋಗ್ರಾಫರ್ (LC)- 18 ರಿಂದ 40 ವರ್ಷ
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ವಿಧವಾ ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
ಸ್ಟೆನೋಗ್ರಾಫರ್ (RPC) ಹುದ್ದೆಗಳಿಗೆ:
SC/ST, ಪ್ರವರ್ಗ-1 & PH ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 150 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ವೇತನ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 30,350-58,250 ರೂ. ವೇತನ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರಿಜಿಸ್ಟ್ರಾರ್
KSAT, 7ನೇ ಮಹಡಿ,
ಕಂದಾಯ ಭವನ
ಕೆ.ಜಿ. ರಸ್ತೆ
ಬೆಂಗಳೂರು-560009
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 31, 2023