ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ (Bigg Boss) ನಿರೂಪಕನ (Anchor) ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್ (Kichcha Sudeep) ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ (Kichcha Sudeep) ಅವರು ಇದೀಗ ಕಾರ್ಯಕ್ರಮವನ್ನು ಬಿಡುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ (Fans) ಬೇಸರವನ್ನುಂಟು ಮಾಡಿದೆ.
ಈ ಕುರಿತು ಸುದೀಪ್ (Kichcha Sudeep) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ (Tweet) ಮಾಡಿದ್ದು, ಬಿಗ್ ಬಾಸ್ (Bigg Boss) ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ.
ಇದನ್ನೂ ಓದಿ : ಫೋನ್ ಪೇ, ಗೂಗಲ್ ಪೇ ನಲ್ಲಿ ಬೇರೆಯವರಿಗೆ ತಪ್ಪಾಗಿ ಹಣ ಕಳಿಸಿದ್ರೆ ವಾಪಾಸ್ ಪಡೆಯುವ ಸುಲಭ ವಿಧಾನ.!
ಕಿಚ್ಚಾ ಸುದೀಪ್ ಧಿಡೀರ್ ನಿರ್ಧಾರ..?
ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್ (Bigg Boss). ಇಷ್ಟು ವರ್ಷಗಳ ಕಾಲ ಬಿಗ್ ಬಾಸ್ (Bigg Boss) ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Thank you all for the great response shown towards #BBK11.
The TVR (number) speaks in volumes about the love you all have shown towards the show and me.
It’s been a great 10+1 years of travel together, and it’s time for me to move on with what I need to do. This will be my last… pic.twitter.com/uCV6qch6eS— Kichcha Sudeepa (@KicchaSudeep) October 13, 2024
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಕಿಚ್ಚ ಸುದೀಪ್ ಅವರಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿದ್ದು, ಇವುಗಳ ಚಿತ್ರೀಕರಣ ಬಾಕಿ ಉಳಿದಿವೆ, ಈ ಕಾರಣಕ್ಕಾಗಿಯೇ ಅವರು ಶೋ ತೊರೆಯುವ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಆದರೆ, ಅಂತಿಮವಾಗಿ ಕಿಚ್ಚ ಸುದೀಪ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. 11ನೇ ಆವೃತ್ತಿ ಆರಂಭವಾಗುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್ (Kichcha Sudeep) ಈ ಬಾರಿ ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಆದರೆ, ನಂತರ ನಡೆದ ಬೆಳವಣಿಗೆಯಲ್ಲಿ ಅವರು ನಿರೂಪಣೆ (Anchoring) ಮಾಡಲು ಒಪ್ಪಿದ್ದರು. ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರವನ್ನು ಸ್ವತಃ ಸುದೀಪ್ ಅವರೇ ಹೇಳಿದ್ದು, ವೀಕ್ಷಕರು ಕಮೆಂಟ್ ಮೂಲಕ ಬೇಸರವನ್ನು ಹೊರಹಾಕುತ್ತಿದ್ದಾರೆ.
ಇದನ್ನೂ ನೋಡಿ : ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಪೋಸ್ ಮಾಡಿದ ಯುವಕ..! ಸಿಎಂ ಸಿದ್ದು ನಕ್ಕು ನಕ್ಕು ಸುಸ್ತು
ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್ಬಾಸ್ (Bigg Boss), ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ನಟ ಕಿಚ್ಚ ಸುದೀಪ್ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ ಎನಿಸಿಕೊಂಡಿದ್ದು, ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಪಾಪ್ಯೂಲರ್ ಆಗಿದೆ ಎಂದರೆ ತಪ್ಪಾಗಲಾರದು.