spot_img
spot_img
spot_img
spot_img
spot_img

ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ

Published on

spot_img

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ (Nandi Hills) ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ.

ಚಿಕ್ಕಬಳ್ಳಾಪುರದ (Chikkaballapur) ಜಾತವಾರ ಹೊಸಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಂದಿ ಗಿರಿಧಾಮದ 38ನೇ ತಿರುವಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬ್ಯಾಗ್‍ನಲ್ಲಿ ಆಧಾರ್ ಕಾರ್ಡ್ ಲಭ್ಯವಾಗಿದ್ದರಿಂದ ಮೃತನ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಚಾಲಕನಾಗಿದ್ದ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನೂ ಸಾಯುವುದಕ್ಕೂ ಮುನ್ನ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಕಳೆದ ಡಿ.15ರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ತೊರೆದಿದ್ದ. ನಂತರ, ನಾನು ನಂದಿಬೆಟ್ಟದಲ್ಲಿದ್ದು ನನ್ನನ್ನ ಮರೆತುಬಿಡಿ, ನಾನು ವಿಷ ಸೇವಿಸಿ ಸಾಯುತ್ತಿದ್ದೇನೆ ಎಂದು ಮನೆಯವರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಸಂಬಂಧಿಕರು ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಇದೀಗ ಒಂದೂವರೆ ತಿಂಗಳ ಬಳಿಕ ನಾರಾಯಣಸ್ವಾಮಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ನಂದಿ ಗಿರಿಧಾಮ ಪೊಲೀಸ್ ( Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

 

 

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!