spot_img
spot_img
spot_img
spot_img
spot_img
spot_img

Sucide: ಶಿಕ್ಷಕನಿಂದ ಮಾನಹಾನಿ ಮೆಸೇಜ್: ಶಾಲೆಯಲ್ಲೇ ವಿದ್ಯಾರ್ಥಿನಿ ಸೂಸೈಡ್ !

Published on

spot_img

ವಿವೇಕವಾರ್ತೆ:- ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ ಹಿನ್ನೆಲೆ ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಜರುಗಿದೆ.

ಪ್ರಕರಣ ಸಂಬಂಧ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು.

ಬಳಿಕ, ಶಾಲೆಯಲ್ಲಿ ಬಿಸ್ಕೇಟ್​ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್ ನಿಷ್ಕ್ರಿಯಗೊಂಡ ಹಿನ್ನೆಲೆ ಇಂದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...
error: Content is protected !!