spot_img
spot_img
spot_img
spot_img
spot_img
spot_img

Murder Case: ಶಿಕ್ಷಕಿ ಮಿಸ್ಸಿಂಗ್ & ಮರ್ಡರ್ ಕೇಸ್: ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಹಂತಕ ಅಂದರ್..!

Published on

spot_img

ಮಂಡ್ಯ: ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಅರೆಸ್ಟ್‌ ಮಾಡಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು,

ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. 

ಈ ವೇಳೆ ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಕೊಲೆಗಾರ ಎಂದು ದೀಪಿಕಾ ಪತಿ ಲೋಕೇಶ್ ಆರೋಪ ಮಾಡಿದ್ದರು. ಈ ಅನುಮಾನದಿಂದ ನಾಪತ್ತೆಯಾಗಿದ್ದ ನಿತೀಶ್‌ನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಿತೀಶ್‌ನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!