ವಿವೇಕವಾಣಿ : ತುಮಕೂರು ಜಿಲ್ಲೆ ಕುದೂರಿನಲ್ಲಿ 2 ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೃತ ಪೋಲಿಸ್ ಸಿಬ್ಬಂದಿ ಶ್ರೀನಿವಾಸ್ (46) ಎಂದು ತಿಳಿದುಬಂದಿದೆ.
ಸೋಲೂರು ಮೂಲದ ಇವರು ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಶ್ರೀನಿವಾಸ್ ಡ್ಯೂಟಿ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಶ್ರೀನಿವಾಸ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೊಂದು ಬೈಕ್‌ನ ಸವಾರ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಕುದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.